ಗುಲ್ಬರ್ಗಾ

ವೈಜ್ಞಾನಿಕ ವಿಲೇವಾರಿಯಾಗಲಿ ತ್ಯಾಜ್ಯ

Published On :

ಕ.ಪ್ರ. ವಾರ್ತೆ  ಯಾದಗಿರಿ  ಆ. 21
ಜೈವಿಕ ವೈದ್ಯಕೀಯ ಘನ ತ್ಯಾಜ್ಯಗಳನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಿಸಿ ವಿಲೇವಾರಿ ಮಾಡಲು ಹೆಚ್ಚಿನ ಗಮನ ನೀಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎ. ಜಿಲಾನಿ ಅವರು ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೂಚಿಸಿದರು.
   ನಗರದ ಡಿಎಚ್ಒ ಕಚೇರಿ ಆವರಣದಲ್ಲಿ ಬುಧವಾರ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಅರಣ್ಯ ಜೀವಿಶಾಸ್ತ್ರ ಹಾಗೂ ಪರಿಸರ ಇಲಾಖೆ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ತಾಲೂಕು ಮಟ್ಟದ ಆರೋಗ್ಯಾಧಿಕಾರಿಗಳಿಗೆ ಏರ್ಪಡಿಸಿದ್ದ ಜೈವಿಕ ವೈದ್ಯಕೀಯ ಘನತ್ಯಾಜ್ಯ ನಿರ್ವಹಣೆ ಕುರಿತ ತರಬೇತಿ ಕಾರ್ಯಾಗಾರವನ್ನು ಉದ್ಫಾಟಿಸಿ ಮಾತನಾಡಿದರು.
ಸಂಸ್ಕರಣೆ ಅಗತ್ಯ: ಸರ್ಕಾರ ಪರಿಸರ ಸ್ವಚ್ಫತೆಗೆ ಹೆಚ್ಚಿನ ಗಮನವನ್ನು ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ತ್ಯಾಜ್ಯ ವಸ್ತುಗಳ ನಿರ್ವಹಣೆ ಅತ್ಯಂತ ಅವಶ್ಯಕವಾಗಿದೆ. ಅದರಲ್ಲಿಯೂ ವಿವಿಧ ರಾಸಾಯನಿಕಗಳಿಂದ ಕೂಡಿರುವ ವೈದ್ಯಕೀಯ ಘನ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ, ವಿಲೇವಾರಿ ಮಾಡುವ ಅವಶ್ಯಕತೆ ಇದೆ. ಸಾರ್ವಜನಿಕರಿಗೆ ಈ ತ್ಯಾಜ್ಯದಿಂದ ಶೀಘ್ರದಲ್ಲಿ ಸೋಂಕು ತಗಲುವ ಸಾಧ್ಯತೆ ಇರುವುದರಿಂದ, ಇದರ ಪರಿಣಾಮಕಾರಿ ವಿಲೇವಾರಿಗೆ ಗಮನ ನೀಡುವಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಸಲಹೆ ನೀಡಿದರು.
  ಪರಿಸರ ಸಂರಕ್ಷಣೆಗೆ ಘನ ಹಾಗೂ ದ್ರವರೂಪದ ತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸಲಹೆ ನೀಡಿದರು. ಪರಿಸರದಲ್ಲಿರುವ ನೀರು, ವಾಯು ಹಾಗೂ ವಾತಾವರಣವನ್ನು ಸ್ವಚ್ಫವಾಗಿಟ್ಟುಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ. ಸರ್ಕಾರದ ವಿವಿಧ ಇಲಾಖೆಗಳೊಂದಿಗೆ ಸಾರ್ವಜನಿಕರು ಕೂಡ ಸಹಕಾರ ನೀಡಿ ಪರಿಸರ ಸ್ವಚ್ಫತೆಗೆ ನೆರವಾಗಬೇಕೆಂದು ಕರೆ ನೀಡಿದರು.
ತರಬೇತಿ: ಪ್ರಾಸ್ತಾವಿಕವಾಗಿ ಮಾತನಾಡಿದ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ಮುಖ್ಯಸ್ಥ ಬಸವರಾಜ ಬಿ., ರಾಜ್ಯದ 29 ಜಿಲ್ಲೆಗಳಲ್ಲಿ ಇಂತಹ 3 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡು 10,150 ಸಿಬ್ಬಂದಿಗೆ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಬಗ್ಗೆ ತರಬೇತಿ ನೀಡಲಾಗಿದೆ. ಸಂಸ್ಥೆಯಿಂದ ಸರ್ಕಾರದ ನಿರ್ದೇಶನದಂತೆ ಪ್ರಸಕ್ತ ಸಾಲಿನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗೆ ಘನತ್ಯಾಜ್ಯ ನಿರ್ವಹಣೆ ಬಗ್ಗೆ, ಕಸಾಯಿ ಖಾನೆಗಳಲ್ಲಿ ಮಾಲೀನ್ಯನಿಯಂತ್ರಣ ಹಾಗೂ ಘನತ್ಯಾಜ್ಯ ನಿರ್ವಹಣೆ ಹಾಗೂ ಕಡಲ ತೀರದ ಜಿಲ್ಲೆಗಳಲ್ಲಿ ಸ್ಥಳೀಯ ಮತ್ತು ಗ್ರಾಮಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಲಾಗುತ್ತಿದೆ. ಇಲ್ಲಿಯೂ ಸಹ ತಾಲೂಕು ಮಟ್ಟದ ಅಧಿಕಾರಿಗಳಿಗೆ, ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರು ಮತ್ತು ಪಿಡಿಒಗಳಿಗೆ ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರಿಗೆ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
   ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಲ್ಲಿಕಾರ್ಜುನ ಮುಕ್ಕಾ ಅಧ್ಯಕ್ಷತೆ ವಹಿಸಿದ್ದರು. ಎನ್ಆರ್ಎಚ್ಎಂ ಜಿಲ್ಲಾ ಯೋಜನಾ ನಿರ್ವಹಣಾಧಿಕಾರಿ ಡಾ. ಅಭಯ ಕುಮಾರ, ಪರಿಸರ ಅಧಿಕಾರಿ ವೆಂಕಟೇಶ ಇದ್ದರು. ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಸಿದ್ರಾಮಪ್ಪ ಹೊನ್ಕಲ್ ಸ್ವಾಗತಿಸಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.