ಗುಲ್ಬರ್ಗಾ

ನೂತನ ಸಿಐ ಕಚೇರಿ ನಿರ್ಮಾಣಕ್ಕೆ ಒತ್ತಾಯ

Published On :

ಕ.ಪ್ರ.ವಾರ್ತೆ  ಯಾದಗಿರಿ  ಆ.23
ನಗರದ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ತೀರಾ ಇಕ್ಕಟ್ಟಿನ ಸ್ಥಳದಲ್ಲಿದ್ದು, ಇದರಿಂದ ಕಚೇರಿ ಆಡಳಿತಕ್ಕೆ ಅಡಚಣೆ ಆಗುತ್ತಿದೆ. ಹೀಗಾಗಿ, ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕನ್ನಡ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
  ಈ ಸಂದರ್ಭ ಮಾತನಾಡಿದ ಸಂಘಟನೆ ಜಿಲ್ಲಾಧ್ಯಕ್ಷ ಚಂದ್ರಶೇಖರ ದಾಸನಕೇರಿ, ಜಿಲ್ಲಾ ಕೇಂದ್ರವಾಗಿ 4 ವರ್ಷ ಕಳೆಯುತ್ತಾ ಬಂದರೂ ಜಿಲ್ಲೆಯಲ್ಲಿ ಅಗತ್ಯ ಸೌಕರ್ಯವಿಲ್ಲದೆ ಜನತೆ ಪ್ರತಿನಿತ್ಯ ಪರದಾಡುವಂತಾಗಿದೆ. ಅದರಂತೆ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಯೂ ಸಹ ಚಿಕ್ಕದಾಗಿದೆ. ಆಡಳಿಕ್ಕೆ ಅಡಚಣೆ ಉಂಟಾಗುತ್ತದೆ. ಹೀಗಾಗಿ, ಹೊಸ ಕಚೇರಿ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
  ಸಮಾಜದ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಅತ್ಯಂತ ಪ್ರಮುಖವಾಗಿದೆ. ತಾಲೂಕಿನ ಗ್ರಾಮೀಣ ಭಾಗದ ಜನತೆ ಪ್ರತಿನಿತ್ಯ ತಮ್ಮ ಸಮಸ್ಯೆ ಮತ್ತು ರಕ್ಷಣೆಗಾಗಿ ಪೊಲೀಸರಲ್ಲಿಗೆ ಬರುತ್ತಾರೆ. ಅವರಿಗೆ ಕುಳಿತುಕೊಳ್ಳಲು ಸ್ಥಳವಿಲ್ಲದೆ ರಸ್ತೆಯ ಮೆಲೆ ಗಂಟೆಗಟ್ಟಲೆ ಕಾಯುವಂತಹ ಸ್ಥತಿ ಇಲ್ಲಿ ನಿರ್ಮಾಣವಾಗಿದೆ. ಮಾತ್ರವಲ್ಲ ವೃತ್ತ ಕಚೇರಿ ಮುಖ್ಯ ರಸ್ತೆಯಲ್ಲಿ ಇರುವುದರಿಂದ ವಾಹನ ನಿಲುಗಡೆಗೂ ತೊಂದರೆಯಾಗುತ್ತಿದೆ. ಪೊಲೀಸ್ ಸಿಬ್ಬಂದಿಗೆ ಕೋಣೆಗಳು ಸಾಲುತ್ತಿಲ್ಲ. ಹೀಗಾಗಿ, ತಕ್ಷಣ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
  ಈ ಸಂದರ್ಭ ಶಿವರಾಜ ದಾಸನಕೇರಿ, ಹಣಮಂತ ದೊಡ್ಮನಿ ಖಾನಳ್ಳಿ, ರಾಜು ಹೊಸಳ್ಳಿಕರ, ವೆಂಕಟೇಶ ಬಂದಳ್ಳಿ, ಅಶೋಕ ಹತ್ತಿಮನಿ, ರಾಜು ಗುರಸಣಗಿ, ಅಬ್ರಾಹಂ ಮತಪಳ್ಳಿ, ಶರಣು ಕುಮಾರ ಮುಂಡ್ರಕೇರಿ ನಾಗೇಂದ್ರ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.