ಪಡಿತರ ಅವ್ಯವಹಾರ: ಅಂಗಡಿ ಪ್ರಾಧಿಕಾರ ಅಮಾನತು
ಯಾದಗಿರಿ: ಶಹಾಪುರ ಪಟ್ಟಣದ ಗಜಾನನ ತರುಣ ಸಂಘದ ನ್ಯಾಯಬೆಲೆ ಅಂಗಡಿ ಸಂಖ್ಯೆ 116ರ ಡೀಲರರು ಪಡಿತರ ವಸ್ತುಗಳ ವಿತರಣೆಯಲ್ಲಿ ಲೋಪದೋಷಗಳು ಎಸಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಈ ನ್ಯಾಯಬೆಲೆ ಅಂಗಡಿಯ ಪ್ರಾಧಿಕಾರವನ್ನು ಜಿಲ್ಲಾಧಿಕಾರಿ ಅಮಾನತುಗೊಳಿಸಿ ಆದೇಶಿಸಿದ್ದಾರೆ ಎಂದು ಆಹಾರ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಈ ನ್ಯಾಯಬೆಲೆ ಅಂಗಡಿಯವರು “@«ÚºÛVÚÀ’ ಯೋಜನೆಯಡಿ ಕಡಿಮೆ ಪ್ರಮಾಣದಲ್ಲಿ ಪಡಿತರ ವಸ್ತು ವಿತರಿಸಿ, ನಿಗದಿಪಡಿಸಿದ ದರಕ್ಕಿಂತ ಹೆಚ್ಚಿಗೆ ಹಣ ಪಡೆದ ಬಗ್ಗೆ ಪಡಿತರ ಚೀಟಿದಾರರಿಂದ ದೂರ ಬಂದ ಹಿನ್ನೆಲೆ ಶಹಾಪುರ ತಹಸೀಲ್ದಾರರು ಸ್ಥಾನಿಕ ವಿಚಾರಣೆ ಮಾಡಿ ಈ ನ್ಯಾಯಬೆಲೆ ಅಂಗಡಿ ಡೀಲರರು ಪಡಿತರ ವಸ್ತುಗಳ ವಿತರಣೆಯಲ್ಲಿ ಲೋಪದೋಷ ಎಸಗಿದ್ದಾರೆ ಎಂದು ವರದಿ ಸಲ್ಲಿಸಿದ್ದರು.
ಆದ್ದರಿಂದ ಅವರ ಅಂಗಡಿ ಪ್ರಾಧಿಕಾರ ಅಮಾನತುಗೊಳಿಸಿದೆ. ಕಾರಣ ಯಾವುದೇ ನ್ಯಾಯಬೆಲೆ ಅಂಗಡಿದಾರರು “@«ÚºÛVÚÀ’ ಯೋಜನೆಯಡಿ ಪಡಿತರ ಚೀಟಿದಾರರಿಗೆ ವಸ್ತುಗಳ ವಿತರಣೆಯಲ್ಲಿ ನಿಗದಿಪಡಿಸಿದ ಪ್ರಮಾಣಕ್ಕಿಂತ ಕಡಿಮೆ ವಿತರಿಸಿದರೆ ಅಥವಾ ಕೆಜಿ ಅಕ್ಕಿಗೆ ನಿಗದಿಪಡಿಸಿದ 1ಕ್ಕಿಂತ ಹೆಚ್ಚಿಗೆ ದರ ಪಡೆದರೆ ಹಾಗೂ ನಿಯಂತ್ರಿತ ವಸ್ತುಗಳಲ್ಲದ ಸಾಬೂನು, ಎಣ್ಣೆ ಇತ್ಯಾದಿಗಳನ್ನು ತೆಗೆದುಕೊಳ್ಳಲು ಒತ್ತಾಯ ಮಾಡಿಸಿದರೆ ಅಂತಹ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಟಿ.ಮಹಮ್ಮದ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

