ಗುಲ್ಬರ್ಗಾ

ಬೇಡಿಕೆ ಈಡೇರಿಕೆಗಾಗಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

Published On :

ಯಾದಗಿರಿ: ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಹಾಗೂ ಇನ್ನಿತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಒಕ್ಕೂಟದ ಜಿಲ್ಲಾ ಘಟಕವು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕೂಟದ ಜಿಲ್ಲಾಧ್ಯಕ್ಷ ಜಗದೀಶ್ ನೂಲಿನವರ್, ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರು ಹಲವಾರು ವರ್ಷಗಳಿಂದ ಕಡಿಮೆ ಸಂಬಳದಲ್ಲಿ ಕೆಸಲ ಮಾಡುತ್ತಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ಸಂಬಳ ಎನ್ನುವಂತೆ ಯುಜಿಸಿ ವೇತನ ನೀಡದೇ ಹೋದರು ತಿಂಗಳಿಗೆ ಕನಿಷ್ಟ ರು. 25 ಸಾವಿರ ವೇತನ ನಿಗದಿಪಡಿಸಿ ಪ್ರತಿ ತಿಂಗಳು ಉಪನ್ಯಾಸಕರ ಖಾತೆಗೆ ಜಮಾ ಆಗುವಂತೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.
ಕೆಲಸ ಮಾಡುತ್ತಿರುವ ಉಪನ್ಯಾಸಕರಿಗೆ ಯಾವುದೇ ಸೇವಾ ಭದ್ರತೆ ಇಲ್ಲ. ಕಡಿಮೆ ಸಂಬಳದಲ್ಲಿ ದುಡಿಸಿಕೊಳ್ಳುತ್ತಿರುವುದು ಅಮಾನವೀಯವಾಗಿದೆ. ಇದರಿಂದ ಹತ್ತಾರು ವರ್ಷಗಳಿಂದ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಉಪನ್ಯಾಸಕರು ಸಂಕಷ್ಟದ ಜೀವ ಸಾಗಿಸುವಂತಾಗಿದೆ. ಸರ್ಕಾರ ಇದನ್ನು ಗಂಭಿರವಾಗಿ ಪರೀಗಣಿಸಿ ಸೇವಾ ಭದ್ರತೆ ಒದಗಿಸಬೇಕು ಹಾಗೂ ಉಪನ್ಯಾಸಕರ ನೇಮಕಾತಿಯಲ್ಲಿ ಅತಿಥಿ ಉಪನ್ಯಾಸಕರಿಗೆ ಪ್ರತಿ ವರ್ಷಕ್ಕೆ ಸಂಬಂಧಿಸಿದಂತೆ ಕೃಪಾಂಕಗಳನ್ನು ನೀಡಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಈ ಕುರಿತ ಮನವಿಪತ್ರವನ್ನು ಅಪರ ಜಿಲ್ಲಾಧಿಕಾರಿ ಜಹೀರಾ ನಸೀಮ್ ಅವರಿಗೆ ಸಲ್ಲಿಸಿದರು. ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಶೀಲಾ ಚಿಂಚೋಳಿ, ಗೌರವಾಧ್ಯಕ್ಷ ವಿಶ್ವನಾಥರೆಡ್ಡಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.