ಸುದ್ದಿ ಸಂಕ್ಷೇಪ
ಅತ್ಯಾಚಾರ ಖಂಡಿಸಿ ಪ್ರತಿಭಟನೆ
ಯಾದಗಿರಿ: ಮುಂಬೈನಲ್ಲಿ ಪತ್ರಿಕಾ ಛಾಯಾಗ್ರಾಹಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಘಟನೆ ಖಂಡಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಶನ್ ನೇತೃತ್ವದಲ್ಲಿ ನಗರದ ಪದವಿ ಕಾಲೇಜು ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.ರಾಷ್ಟ್ರ ರಾಜಧಾನಿ ದೆಹಲಿ ರೇಪ್ ಪ್ರಕರಣ ಇನ್ನೂ ಜನಮಾನಸದಿಂದ ಮರೆಯಾಗುವ ಮುನ್ನವೇ ಮುಂಬೈನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಇದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಮಹಿಳೆಯರಿಗೆ ದೇಶದಲ್ಲಿ ಭದ್ರತೆ ಇಲ್ಲದಂತಾಗಿದೆ. ಇಂಥ ಪ್ರಕರಣ ದಿನೇದಿನೇ ಹೆಚ್ಚುತ್ತಿದೆ. ಆದ್ದರಿಂದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಹಚ್ಚಿ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಡಿ.ಉಮಾದೇವಿ, ಸಂಘಟನೆ ಜಿಲ್ಲಾ ಸಂಚಾಲಕಿ ಗೌರಮ್ಮ, ಬಸಮ್ಮ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
'ಬಿಲ್ಡ್ಟೆಕ್ನಿಂದ ಗ್ರಾಹಕರಿಗೆ ಲಾಭ'
ಯಾದಗಿರಿ: ಅಲ್ಟ್ರಾಟೆಕ್ ಸಿಮೆಂಟ್ ಕಂಪನಿಯು ಪ್ರಥಮ ಬಾರಿಗೆ ಜಿಲ್ಲಾ ಕೇಂದ್ರದಲ್ಲಿ ಬಿಲ್ಡ್ ಟೆಕ್ ವಸ್ತು ಪ್ರದರ್ಶನ ಏರ್ಪಡಿಸಿರುವುದರಿಂದ ಜಿಲ್ಲೆಯ ಗ್ರಾಹಕರಿಗೆ ಲಾಭವಾಗಲಿದೆ ಎಂದು ಮಾಜಿ ಶಾಸಕ ಡಾ. ವೀರಬಸವಂತರಡ್ಡಿ ಮುದ್ನಾಳ ಹೇಳಿದರು. ಶುಕ್ರವಾರ ನಗರದ ಬಾಲಾಜಿ ಕಲ್ಯಾಣಮಂಟಪದಲ್ಲಿ ಮೂರು ದಿನಗಳ ಕಾಲ ನಡೆದ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ಒಂದೇ ಸೂರಿನಲ್ಲಿ ಈ ಎಲ್ಲ ಕಟ್ಟಡ ಸಾಮಗ್ರಿಗಳು ಹಾಗೂ ಮಾಹಿತಿಗಳು ಸಿಗುತ್ತಿದ್ದು, ಜಿಲ್ಲೆಯ ಜನರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಕಂಪನಿಯ ಅಶೋಕರಡ್ಡಿ, ಸಂಗಮೇಶ ಪಾಟೀಲ್, ಚೇತನ್ ಪಾಟೀಲ, ಹನುಮಾನ ಪ್ರಸಾದ್ ಗೌರ, ರಾಮನಿವಾಸ್ ಗೌರ ಇತರರು ಇದ್ದರು.
ಕರವೇ ತಾಲೂಕು ಪದಾಧಿಕಾರಿಗಳ ಆಯ್ಕೆ
ಯಾದಗಿರಿ: ನಗರದ ಪ್ರವಾಸಿ ಮಂದಿರದಲ್ಲಿ ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರವೇ ತಾಲೂಕು ಘಟಕಕ್ಕೆ ಪದಾಧಿಕಾರಿಗಳನ್ನು ನೇಮಿಸಲಾಯಿತು.
ನೂತನ ಪದಾಧಿಕಾರಿಗಳು: ವೆಂಕಟೇಶ ಮಿಲ್ಟ್ರಿ (ತಾಲೂಕು ಅಧ್ಯಕ್ಷ), ಭೀಮಾಶಂಕರ ಹತ್ತಿಕುಣಿ (ಗೌರವ ಅಧ್ಯಕ್ಷ), ಮಲ್ಲು ರಾಮಸಮುದ್ರ (ಉಪಾಧ್ಯಕ್ಷ), ಮಲ್ಲು ವರ್ಕನಳ್ಳಿ (ಪ್ರಧಾನ ಕಾರ್ಯದರ್ಶಿ), ಶ್ರೀನಿವಾಸ ಚಾಮನಳ್ಳಿ (ಸಂಚಾಲಕ), ಶರಣುಗೌಡ ಯಂಪಾಡ (ಸಹ ಕಾರ್ಯದರ್ಶಿ), ಬಸವರಾಜ ನಾಯಕ ಸೈದಾಪುರ (ಸಂಘಟನಾ ಕಾರ್ಯದರ್ಶಿ), ಅಬ್ದುಲ ಚಿಗೆನೋರ ವಡಗೇರಾ (ಸಹ ಸಂಘಟನಾ ಕಾರ್ಯದರ್ಶಿ), ನೆಹರು ಆಶನಾಳ (ಸಹ ಸಂಚಾಲಕ) ಅವರನ್ನು ನೇಮಕ ಮಾಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

