ಸಮಸ್ಯೆ ನಿವಾರಣೆಗೆ ಸೋನಿಯಾಗೆ ಮನವಿ
ಕ.ಪ್ರ.ವಾರ್ತೆ ಚಿಂಚೋಳಿ ಆ.25
ರಾಜ್ಯದಲ್ಲಿ ಬಂಜಾರ ಜನಾಂಗದವರು ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ನಿವಾರಿಸುವಂತೆ ಆಲ್ ಇಂಡಿಯಾ ಬಂಜಾರಾ ಸೇವಾಸಂಘ ನಿಯೋಗದೊಂದಿಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ ಎಂದು ಶಾಸಕ ಡಾ. ಉಮೇಶ ಜಾಧವ ತಿಳಿಸಿದ್ದಾರೆ.
ಬಂಜಾರ ಸಮಾಜದವರು ಎದುರಿಸುತ್ತಿರುವ ಬಡತನ, ನಿರುದ್ಯೋಗ, ಮಕ್ಕಳ ಮಾರಾಟ, ಉದ್ಯೋಗಕ್ಕಾಗಿ ಬೇರೆ ನಗರ ಪ್ರದೇಶಗಳಿಗೆ ವಲಸೆ ಹೋಗುವುದು ತಪ್ಪಿಸುವುದು ಮತ್ತು ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ದೂರ ಉಳಿದಿರುವ ಬಂಜಾರ ಜನಾಂಗಕ್ಕೆ ಮುಖ್ಯವಾಹಿನಿಗೆ ತರುವಂತೆ ಮತ್ತು ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ಹೇಳಿದರು.
ಕೇಂದ್ರ ಸಚಿವ ಆಸ್ಕರ ಫರ್ನಾಂಡಿಸ್, ಎಂ. ವೀರಪ್ಪ ಮೊಯ್ಲಿ, ರೇಲ್ವೆ ಸಚಿವ ಡಾ. ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯದ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯಸಿಂಗ್, ಜನಾರ್ಧನ ತ್ರೀವೇದಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಗಿದೆ ಎಂದರು.
ಬಂಜಾರ ಸಮಾಜದ ನಿಯೋಗದಲ್ಲಿ ಕೇಂದ್ರ ಸಚಿವ ಬಲರಾಮ ನಾಯಕ, ಡಾ. ಶಂಕರ ನಾಯಕ, ಮಾಜಿ ಸಂಸದ ಹರಿಭಾವು ರಾಠೋಡ, ವಿಧಾನ ಪರಿಷತ್ ಮಾಜಿ ಸದಸ್ಯ ಪ್ರಕಾಶ ರಾಠೋಡ, ಜಲಜಾ ನಾಯಕ, ರಾಮಾ ನಾಯಕ ಇದ್ದರು.
ದೆಹಲಿಯಲ್ಲಿ ಜರುಗಿದ ಸಮಾಜ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ದೇಶದಲ್ಲಿ ಬಂಜಾರ ಸಮಾಜವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಮಾಜಿ ಸಚಿವ ರೇವುನಾಯಕ ಬೆಳಮಗಿ, ಸುಭಾಷ ರಾಠೋಡ, ಡಾ. ಟಿ.ಸಿ. ರಾಠೋಡ, ಸೇವಾ ನಾಯಕ, ನಿವೃತ್ತ ಐಪಿಎಸ್ ಅಧಿಕಾರಿ ಜಗನ್ನಾಥರಾವ, ಬಿ.ಕೆ. ನಾಯಕ, ಅಮರಸಿಂಗ್ ತಿಲಾವತ್, ರಾಜೀವ ನಾಯಕ, ಡಿ.ಟಿ. ನಾಯಕ, ಭೀಮಲಾ ನಾಯಕ ಇತರರು ಭಾಗವಹಿಸಿದರು ಎಂದು ಶಾಸಕ ಡಾ. ಉಮೇಶ ಜಾಧವ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

