ಗುಲ್ಬರ್ಗಾ

ಕಾಯಂಪೀಠ ಉದ್ಘಾಟನೆಗೆ ಸಿದ್ಧರಾಗಿ: ನ್ಯಾ.ಪಾಟೀಲ್

Published On :

ಗುಲ್ಬರ್ಗ: ಗುಲ್ಬರ್ಗ ಹೈಕೋರ್ಟ್ ಕಾಯಂ ಪೀಠದ ಉದ್ಘಾಟನಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ರಚಿಸಲಾಗಿರುವ ಎಲ್ಲ ಸಮಿತಿಗಳು ಕಾರ್ಯಕ್ರಮ ಯಶಸ್ವಿಗೊಳಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ರಾಜ್ಯ ಹೈಕೋರ್ಟ್‌ನ ನ್ಯಾಯಮೂರ್ತಿಗಳು, ಹೈಕೋರ್ಟ್ ಕಟ್ಟಡ ಸಮಿತಿಯ ಅಧ್ಯಕ್ಷರೂ ಆದ ಎನ್.ಕೆ. ಪಾಟೀಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಗುಲ್ಬರ್ಗ ಹೈಕೋರ್ಟ್‌ನ ಕಾಯಂ ಪೀಠದ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಹೈಕೋರ್ಟ್ ಕಾಯಂ ಪೀಠದ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು. ಈ ನಿಟ್ಟಿನಲ್ಲಿ ಎಲ್ಲ ಬಸ್ ನಿಲ್ದಾಣಗಳು ಹಾಗೂ ಸಾರ್ವಜನಿಕ ಆಸ್ಪತ್ರೆಗಳ ಬಳಿಯಲ್ಲಿ ಬ್ಯಾನರ್‌ಗಳನ್ನು ಅಳವಡಿಸಬೇಕು, ಆಕಾಶವಾಣಿ, ಎಫ್‌ಎಂ ರೇಡಿಯೋಗಳ ಮೂಲಕ ಹಾಗೂ ಸ್ಥಳೀಯ ಕೇಬಲ್ ಚಾನಲ್‌ಗಳನ್ನು ಬಳಸಿಕೊಂಡು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಇದಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಡಿಸಿ ಪ್ರಸನ್ನಕುಮಾರ್‌ಗೆ ತಿಳಿಸಿದರು.
ಕಾರ್ಯದಲ್ಲಿ ನೆರವು ನೀಡಲು ಸ್ಥಳೀಯ ಬಾರ್ ಕೌನ್ಸಿಲ್ ಸದಸ್ಯರ ನೆರವು ಪಡೆಯಿರಿ, ಸ್ಥಳೀಯ, ಹೊರ ಜಿಲ್ಲೆಗಳಿಂದ ಆಗಮಿಸುವ ವಾಹನಗಳ ನಿಲುಗಡೆಗೆ ಸೂಕ್ತ ಏರ್ಪಾಡು ಮಾಡಿ ಈ ಪ್ರಕ್ರಿಯೆಯಲ್ಲಿ ಗೊಂದಲವುಂಟಾಗಬಾರದು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಮುಖ್ಯ ವೇದಿಕೆ ನಿರ್ಮಾಣದ ಮಾದರಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿ ಎನ್.ಕೆ. ಪಾಟೀಲ್, ನ್ಯಾಯಮೂರ್ತಿಗಳು, ವಕೀಲರು, ಸರ್ಕಾರಿ ಅಧಿಕಾರಿಗಳು ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಗ್ಯಾಲರಿಗಳನ್ನು ನಿರ್ಮಿಸುವಂತೆ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಮಹಾಗಾಂವಕರ್ ಅವರಿಗೆ ತಿಳಿಸಿದರು.
ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಆರ್.ಬಿ. ಬೂದಿಹಾಳ, ಗುಲ್ಬರ್ಗದ ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್ ರಾಜಮೋಹನ್ ಶ್ರೀವಾಸ್ತವ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಲ್ಲವಿ ಆಕುರಾತಿ, ವಿವಿಧ ಸಮಿತಿಗಳ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಗುಲ್ಬರ್ಗ ಹೈಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಡಿ.ಕೆ. ಯೂಸೂಫ್, ವಕೀಲರು ಸಭೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.