ಅಲ್ಪಸಂಖ್ಯಾತ ಮಕ್ಕಳ ಸ್ಕಾಲರ್‌ಶಿಪ್ ಆನ್‌ಲೈನ್
ಕ.ಪ್ರ.ವಾರ್ತೆ ಗುಲ್ಬರ್ಗ ಆ. 26
ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ ಈ ವರ್ಷದಿಂದ ಆನ್‌ಲೈನ್ ಮಾಡಲಾಗಿದೆ. ಈಗಾಗಲೇ ಆಗಸ್ಟ್ 22ರಿಂದಲೇ ವಿದ್ಯಾರ್ಥಿ ವೇತನ ಬಯಸುವ ಅರ್ಹರು ಆನ್‌ಲೈನ್ ಅರ್ಜಿ ಸಲ್ಲಿಸುತ್ತಿದ್ದಾರೆ. ಅರ್ಜಿ ಸಲ್ಲಿಕೆ ಸೆ.22ರವರೆಗೂ ಮುಂದುವರಿಯಲಿದೆ.
ವಿದ್ಯಾರ್ಥಿ ವೇತನ ವಿತರಣೆಯಲ್ಲಿನ ಅನಗತ್ಯ ವಿಳಂಬ ಪರಿಹರಿಸುವ ಹಾಗೂ ಅರ್ಹರಿಗೇ ವಿದ್ಯಾರ್ಥಿ ವೇತನ ಕೈಸೇರುವಂತೆ ಮಾಡುವ ದಿಶೆಯಲ್ಲಿ ಇಂದೊಂದು ವಿನೂತನ ಕ್ರಮ ಎಂದು ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪೌರಾಡಳಿತ, ಸಾರ್ವಜನಿಕ ಉದ್ದಿಮೆಗಳು, ವಕ್ಫ್ ಮತ್ತು ಹಜ್ ಸಚಿವ ಖಮರುಲ್ ಇಸ್ಲಾಂ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಈ ವೇತನ ನೀಡುತ್ತದೆ. ಕೇಂದ್ರ 70ಯಷ್ಟು ತನ್ನ ಪಾಲು ನೀಡಿದ್ದು, ರಾಜ್ಯ 32 ಕೋಟಿ ಹೊಂದಿಸಿದ್ದು, ಈ ಯೋಜನೆ ಅನುಷ್ಠಾನಕ್ಕಾಗಿ ಈಗಾಗಲೇ 102 ಕೋಟಿ ಲಭ್ಯವಿದೆ ಎಂದರು.
ಕಳೆದ ವರ್ಷ ಈ ಯೋಜನೆಯಲ್ಲಿ 6.14 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಪ್ರಸಕ್ತ ವರ್ಷ 6.50 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ನಿರೀಕ್ಷೆ ಇದೆ. ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಅಧ್ಯಯನದಲ್ಲಿರುವ ವಿದ್ಯಾರ್ಥಿಗಳಿಗೆ ಈ ಯೋಜನೆ ಅನ್ವಯ. ಪ್ರತಿ ವಿದ್ಯಾರ್ಥಿಗೆ 1 ಸಾವಿರ ವಿದ್ಯಾರ್ಥಿ ವೇತನ ನೀಡಲಾಗುತ್ತದೆ ಎಂದು ಹೇಳಿದರು.
ಯೋಜನೆ ಆನ್‌ಲೈನ್ ಮಾಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ರಾಜ್ಯದಲ್ಲಿರುವ ಶಿಕ್ಷಣ ಇಲಾಖೆಯ ನೆರವು ಪಡೆದಿದ್ದು, ಆ ಇಲಾಖೆಗೆ ಅಗತ್ಯ ಸೂಚನೆಗಳನ್ನೂ ನೀಡಲಾಗಿದೆ ಎಂದು ಸಚಿವ ಇಸ್ಲಾಂ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಾಲ ಬಾಧೆ; ರೈತ ಆತ್ಮಹತ್ಯೆ
ಕೆ.ಆರ್. ಪೇಟೆ: ಸಾಲ ಬಾಧೆಯಿಂದ ರೈತನೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮೂಡನಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಗ್ರಾಮದ ಮುದ್ದೇಗೌಡ ಪುತ್ರ ಬಸವರಾಜು(40) ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಜಮೀನಿನ ಬಳಿ ವಿಷ ಸೇವಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಸವರಾಜು ಅವರನ್ನು ಗ್ರಾಮಸ್ಥರು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬಸವರಾಜು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಗ್ರಾಮಾಂತರ ಠಾಣೆ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

