ಸ್ನಾತಕೋತ್ತರ ಪ್ರವೇಶಕ್ಕೆ ಇಂದು ಕೌನ್ಸೆಲಿಂಗ್
ಯಾದಗಿರಿ: ಇಲ್ಲಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಸ್ನಾತಕೋತ್ತರ ಪ್ರವೇಶಗಳ ಮೊದಲ ಹಂತ ಮುಗಿದಿದ್ದು, ಬಾಕಿ ಉಳಿದ ಸಿಟುಗಳಿಗಾಗಿ ಮಂಗಳವಾರ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಸುಭಾಷಚಂದ್ರ ಕೌಲಗಿ ತಿಳಿಸಿದ್ದಾರೆ. ಪ್ರಥಮ ಪಟ್ಟಿಯಲ್ಲಿ ಆಯ್ಕೆಯಾಗದೇ ಉಳಿದ ಅಭ್ಯರ್ಥಿಗಳು ತಮ್ಮ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಕೌನ್ಸಿಲಿಂಗ್ಗೆ ಹಾಜರಾಗಬೇಕು. ಎಂಎ ಕನ್ನಡ, ಅರ್ಥಶಾಸ್ತ್ರ, ಇತಿಹಾಸ, ರಾಜ್ಯಶಾಸ್ತ್ರ, ಎಂಕಾಂ, ಎಂಎಸ್ಸಿ ಗಣಿತಶಾಸ್ತ್ರ, ಗಣಕ ವಿಜ್ಞಾನ, ಹಾಗೂ ಪಿಜಿಡಿಸಿಎ ವಿಭಾಗಗಳಿಗೆ ಮಂಗಳವಾರ ಬೆಳಗ್ಗೆ 10 ಗಂಟೆಗೆ ಕೌನ್ಸಿಲಿಂಗ್ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9448651191 ಸಂಪರ್ಕಿಸುವಂತೆ ಕೋರಿದ್ದಾರೆ.
ಯುವಕ ನೀರುಪಾಲು
ಶಹಾಪುರ: ತಾಲೂಕಿನ ದೋರನಹಳ್ಳಿ ಸಮೀಪದ ಕಾಲುವೆಯಲ್ಲಿ ಈಜಲು ಹೋಗಿ ತೊಂದರೆಗೆ ಸಿಲುಕಿಕೊಂಡ ವ್ಯಕ್ತಿಯನ್ನು ಉಳಿಸಲು ಹೋದ ಆತನ ಗೆಳೆಯ ನೀರುಪಾಲಾದ ಘಟನೆ ಭಾನುವಾರ ಸಂಜೆ ನಡೆದಿದೆ. ರಾಜಾಸ್ಥಾನ ಮೂಲದ ರೈಮಲ್ ಉದ್ದಾರಾಮ (23) ಮೃತ ಯುವಕ. ಭಾನುವಾರ ರಜೆ ಇದ್ದ ಹಿನ್ನೆಲೆಯಲ್ಲಿ ಸಮೀಪದ ಕಾಲುವೆಗೆ ನೀರಿನ ಆಳ ತಿಳಿಯದೇ ಈಜಲು ಇಳಿದಾಗ ಸುಳಿಗೆ ಸಿಲುಕಿ ಒಬ್ಬಾತ ತೇಲಿ ಹೋಗುತ್ತಿದ್ದ. ಆತನನ್ನು ಉಳಿಸಲು ಹೋದ ರೈಮಲ್ ತಿರುವಿನಲ್ಲಿ ಸಿಕ್ಕುಬಿದ್ದು ಮೃತಪಟ್ಟಿದ್ದಾನೆ. ಮತ್ತೊಬ್ಬ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾನೆ. ಭಾನುವಾರ ರಾತ್ರಿಯಿಡೀ ಅಗ್ನಿಶಾಮಕದಳದ ಸಿಬ್ಬಂದಿ ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿ ಮೃತ ದೇಹ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ಶಹಾಪುರ ಠಾಣೆಯಲ್ಲಿ ದಾಖಲಾಗಿದೆ.
ರೈತರ ಮನವಿ
ಶಹಾಪುರ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘವು ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ತಹಸೀಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿತು. ಸಂಘದ ತಾಲೂಕು ಅಧ್ಯಕ್ಷ ದಾವಲಸಾಬ ನಧಾಪ್, ಸಂಘಟನೆಯ ಎಸ್.ಎಂ. ಸಾಗರ, ಮಲ್ಲಯ್ಯ ಪೂಲಂಪಲ್ಲಿ, ಹಣಮಂತ ಗೋನಾಲ, ನಿಂಗಪ್ಪ ನಾಟೇಕಾರ, ಶಂಕ್ರಪ್ಪ ಮಕ್ತಾಪೂರ, ಪಂಪಣ್ಣ ಹೂಸಮನಿ, ಎಂ.ಬಿ. ನಾಟೇಕಾರ, ಪ್ರಕಾಶ ಭಂಡಾರಿ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

