ಸಂಸ್ಕೃತಿ ನಮ್ಮ ಜೀವನದ ನೆಲೆಯಾಗಲಿ: ಕೆಂಪಯ್ಯ
ಗುಲ್ಬರ್ಗ: ಕಲೆ, ಸಾಹಿತ್ಯ, ಸಂಗೀತ, ಜಾನಪದ ಸೊಗಡು ಇಲ್ಲಿನ ಸಂಸ್ಕೃತಿ ನಮ್ಮ ಜೀವನದ ನೆಲೆಯಾಗಬೇಕೆಂದು ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷ, ಅಂತರಾಷ್ಟ್ರೀಯ ಜಾನಪದ ಖ್ಯಾತ ಕಲಾವಿದ ಡಾ. ಬಾನಂದೂರು ಕೆಂಪಯ್ಯ ಅಭಿಪ್ರಾಯಪಟ್ಟರು.
ನಗರದಲ್ಲಿ ಡಾ. ಬಾಬು ಜಗಜೀವನರಾಮ ಸ್ಮಾರಕ ಶಿಕ್ಷಣ ಸಂಸ್ಥೆಯ ಸಂವಿಧಾನ ಶಿಲ್ಪಿ ಸಂಗೀತ ವಿದ್ಯಾಲಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶನಾಲಯ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಈಚೇಗೆ ನಡೆದ ರಾಜ್ಯಮಟ್ಟದ ಸಾಂಸ್ಕೃತಿಕ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸುಲಫಲ ಮಠದ ಡಾ. ಮಹಾಂತ ಶಿವಾಚಾರ್ಯರು ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು. ಡಾ. ಎಂ. ಎಸ್. ಪಾಸೋಡಿ, ಚಲನಚಿತ್ರ ನಿರ್ದೇಶಕ ಬಿ.ಎ. ಪುರುಷೋತ್ತಮ, ಹೆಚ್ಚುವರಿ ಎಸ್ಪಿ ಕಾಶಿನಾಥ ತಳಕೇರಿ, ಸುಚಿತ್ರಾ ಬಾನಂದೂರು, ಚಲನಚಿತ್ರ ನಿದೇಶಕ ಶರಣು ಗದ್ವಾಲ್, ಹಾಸನದ ಎ. ದೇವರಾಜ, ವೆಂಕಟೇಶ, ಬಿ.ಎ. ಭಜಂತ್ರಿ, ಸುರೇಶ ಬಡಿಗೇರ, ರಾಜಶೇಖರ ಗೋನಾಯಕ, ಮಾನೇಶ ಬಿಲ್ಲಾವ, ಮೋಹನರಾಜ ಜಿ. ಮೈತ್ರಿ, ಪ್ರಮೋದ ಪುರಾಣಿಕ, ಸಿದ್ದಾರೂಢ ಸಮತಾಜೀವನ, ಕಲಾವಿದರಾದ ವಿಶ್ವನಾಥ ತೊಟನಳ್ಳಿ ಮುಂತಾದವರು ಉಪಸ್ಥಿತರಿದ್ದರು.
ದಿಯ್ಯಾ ಉದಯಕುಮಾರ್ ವಿವಿಧ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು. ಸಂಸ್ಥೆಯ ಕಾರ್ಯದರ್ಶಿ ಶರಣಪ್ಪ ತೋರಣಕರ್ ಸ್ವಾಗತಿಸಿದರು. ಶಿವಲಿಂಗಪ್ಪ ಗೌಳಿ ನಿರೂಪಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಪ್ರೋತ್ಸಾಹಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

