ಗುಲ್ಬರ್ಗಾ

'ಬಸವ ವಸತಿ' ಹಣ ಪಾವತಿಗೆ ಆಗ್ರಹ

Published On :

ಸುರಪುರ: ತಾಲೂಕಿನ ಬಸವ ವಸತಿ ಯೋಜನೆ ಅಡಿಯಲ್ಲಿ ಮನೆ ಕಟ್ಟಿಕೊಂಡ ಫಲಾನುಭವಿಗಳಿಗೆ ಕೂಡಲೆ ಹಣ ಪಾವತಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ನೇತೃತ್ವದಲ್ಲಿ ನೂರಾರು ಫಲಾನುಭವಿಗಳು ತಾಲೂಕು ಪಂಚಾಯಿತಿ ಕಚೇರಿ ಎದುರು ಇತ್ತೀಚೆಗೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ವೇದಿಕೆಯ ತಾಲೂಕು ಪ್ರಧಾನ ಕಾರ್ಯದರ್ಶಿ ವೆಂಕಟೇಶ ಬೈರಿಮಡ್ಡಿ ಮಾತನಾಡಿ, 2010-11ನೇ ಸಾಲಿನ ಬಸವ ವಸತಿ ಯೋಜನೆ ಅಡಿಯಲ್ಲಿ ತಾಲೂಕಿಗೆ ಹತ್ತು ಸಾವಿರ ಮನೆಗಳು ಮಂಜೂರಾಗಿದ್ದವು. ವಸತಿ ಯೋಜನೆಯಲ್ಲಿ ಆಯ್ಕೆಗೊಂಡ ಫಲಾನುಭವಿಗಳು ತಮ್ಮ ಗುಡಿಸಿಲುಗಳನ್ನು ನೆಲಸಮಗೊಳಿಸಿ ಸಾಲಸೂಲ ಮಾಡಿ ಮನೆ ಕಟ್ಟಿಕೊಂಡಿದ್ದಾರೆ. ಇದರಲ್ಲಿ ಶೇ.40ರಷ್ಟು ಫಲಾನುಭವಿಗಳಿಗೆ ಇದುವರೆಗೂ ಹಣ ನೀಡಿಲ್ಲ. ಹೀಗಾಗಿ ಮನೆ ಕಟ್ಟಿಕೊಂಡವರು ಹಣಕ್ಕಾಗಿ ನಿತ್ಯ ಪರದಾಡುತ್ತಿದ್ದಾರೆ. ಆದರೆ ಅಧಿಕಾರಿಗಳು ಹಣ ನೀಡದೇ ವಿನಹಕಾರಣ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾರಣ ಮನೆ ಕಟ್ಟಿಕೊಂಡ ಎಲ್ಲಾ ಫಲಾನುಭವಿಗಳಿಗೆ ತಕ್ಷಣವೆ ಹಣ ಬಿಡುಗಡೆ ಮಾಡುವಂತೆ ತಾಲೂಕು ಅನುಷ್ಠಾನ ಅಧಿಕಾರಿಗಳಿಗೆ ಆದೇಶಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಾಪಂ ವ್ಯವಸ್ಥಾಪಕ ಪಾಲಯ್ಯ ಅವರಿಗೆ ಸಲ್ಲಿಸಿದರು. ತಾಲೂಕು ಅಧ್ಯಕ್ಷ ವೆಂಕಟೇಶ ಪ್ಯಾಪ್ಲಿ, ಅಂಬ್ಲಯ್ಯ ಬೇಟೆಗಾರ, ವೆಂಕಟೇಶ ಕುಪಗಲ್, ಶ್ರೀನಿವಾಸ ಬೈರಿಮಡ್ಡಿ, ರವಿ ಕೆಂಭಾವಿ, ಪ್ರಕಾಶ ಹೆಗ್ಗಣದೊಡ್ಡಿ, ಪರುಶುರಾಮ ಮಾಲಗತ್ತಿ, ರಾಯಪ್ಪ ತಿಪನಟಗಿ, ಆದಯ್ಯ ಗುರಿಕಾರ, ನೀಲಕಂಠ ಮಲ್ಲಾ, ಶಿವನಗೌಡ ಸದಬ, ಮಲ್ಲಿಕಾರ್ಜುನ ಬೈರಿಮಡ್ಡಿ, ಅಯ್ಯಣ್ಣ ಗೋನಾಲ, ವೆಂಕೋಬ ಲಿಂಗದಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಮಹಿಳೆಯರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.