ಗುಲ್ಬರ್ಗಾ

'ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ'

Published On :

ಸಿಂಧನೂರು: ಶ್ರಾವಣ ಮಾಸದಲ್ಲಿ ಶಿವಶರಣರ ಜೀವನ ಚರಿತ್ರೆ ಪುರಾಣಗಳನ್ನು ಕೇಳುವುದರೊಂದಿಗೆ ಭಕ್ತಿ ಮಾರ್ಗದಲ್ಲಿ ಸಾಗಿ ಜೀವನದಲ್ಲಿ ಒಳ್ಳೆಯ ಆಚಾರ ವಿಚಾರ ಸಂಸ್ಕಾರಗಳನ್ನು ಹೊಂದುವುದು ಅಗತ್ಯವೆಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ರಮಾದೇವಿ ಶಂಭೋಜಿ ಹೇಳಿದರು.
ನಗರದ ವಳಕೋಟೆ ವೀರಭದ್ರೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿರುವ 19ನೇ ವರ್ಷದ ಪುರಾಣ ಪ್ರವಚನದಲ್ಲಿ ಸಜ್ಜಲಗುಡ್ಡದ ಮಾತೆ ಶರಣಮ್ಮ ತಾಯಿಯವರ ಪುರಾಣ ಪ್ರವಚನದಲ್ಲಿ ಮಂಗಳವಾರ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಹಾಗೂ ಸಂಸ್ಕಾರ ನೀಡಬೇಕೆಂದರು.  
ಹನುಮಸಾಗರದ ಸಕ್ರಪ್ಪ ಶಾಸ್ತ್ರಿಗಳು ಪುರಾಣ ಪ್ರವಚನ ಮಾಡಿದರು. ಜೆ.ಎಚ್.ಎಸ್. ಗವಾಯಿಗಳು ಗಾಯನ ಮಾಡಿದರು. ಸಂಗೀತ ಶಿಕ್ಷಕ ಮಾರುತೇಶ ತಬಲಾ ಸಾಥ್ ನೀಡಿದರು. ಅರ್ಚಕ ವೀರೇಶ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.