ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ಯಾದಗಿರಿ, ಆ.28
ಗೋಹತ್ಯೆ ನಿಷೇಧ ಮಸೂದೆಯನ್ನು ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾಧ್ಯಕ್ಷ ವೀರಣ್ಣಗೌಡ ಮಲ್ಲಾಬಾದಿ ನೇತೃತ್ವದಲ್ಲಿ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಲು ಸಿದ್ಧಪಡಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆ ಮತ್ತು 2012ರಲ್ಲಿ ಕೈಗೊಂಡಿದ್ದ ತಿದ್ದುಪಡಿಯನ್ನು ಹಿಂದಕ್ಕೆ ಪಡೆದಿರುವುದು ಖಂಡನೀಯ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಗೋ ಪ್ರೇಮಿಗಳ ಭಾವನೆಗೆ ಧಕ್ಕೆ: ಗೋಹತ್ಯೆ ನಿಷೇಧ ಕಾಯ್ದೆಯನ್ನು ಈ ಹಿಂದಿನ ಬಿಜೆಪಿ ಸರ್ಕಾರ ಉಭಯ ಸದನಗಳಲ್ಲಿ ಅನುಮೋದಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿತ್ತು. ಆದರೆ ರಾಜ್ಯಪಾಲರು ಅದನ್ನು ತಡೆಹಿಡಿದಿದ್ದರು. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಮಹತ್ವದ ಮಸೂದೆಯನ್ನು ಹಿಂಪಡೆದುಕೊಳ್ಳುವ ಮೂಲಕ ಕೋಟ್ಯಂತರ ಗೋ ಪ್ರೇಮಿಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದೆ ಎಂದು ಕಾರ್ಯಕರ್ತರು ದೂರಿದರು.
ಸಾಂಪ್ರದಾಯಿಕ ಕೃಷಿಗೆ ಪೆಟ್ಟು: ಕಾಯ್ದೆಯನ್ನು ಹಿಂಪಡೆದಿರುವುದರಿಂದ ಸಾಂಪ್ರದಾಯಕ ಕೃಷಿಗೆ ಬಲವಾದ ಪೆಟ್ಟು ಬಿದ್ದಿದೆ. ಹಸು, ಎತ್ತುಗಳನ್ನು ಕಸಾಯಿಖಾನೆಗೆ ಕಳುಹಿಸುವ ಈ ನಿರ್ಣಯದಿಂದ ರೈತರು ರಸಾಯನಿಕ ಗೊಬ್ಬರವನ್ನು ಅವಲಂಬಿಸುವಂತೆ ಮಾಡುತ್ತದೆ. ಆದ್ದರಿಂದ ಸರ್ಕಾರದ ಈ ಕ್ರಮ ಖಂಡಿಸುವುದಾಗಿ ಹೇಳಿದರು.
ಪಕ್ಷದ ಸಂಘಟನಾ ಕಾರ್ಯದರ್ಶಿ ನೀಲಕಂಠರಾಯ ಯಲ್ಹೇರಿ, ಮುಖಂಡ ಚಂದ್ರಶೇಖರಗೌಡ ಮಾಗನೂರ ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ವಿವಿಧ ಎ ಗ್ರೇಡ್ ದೇವಸ್ಥಾನಗಳ ಸಮಿತಿಗೆ ನೇಮಕವಾಗಿದ್ದ ದೇವಸ್ಥಾನ ವ್ಯವಸ್ಥಾಪಕ ಮಂಡಳಿಯನ್ನು ರದ್ದುಗೊಳಿಸಿ ಕಾಂಗ್ರೆಸ್ಸೀಕರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ವೀರಣಗೌಡ ಮಲ್ಲಾಬಾದಿ, ಲಿಂಗಪ್ಪ ಹತ್ತಿಮನಿ, ಮಲ್ಲಿಕಾರ್ಜುನ ಗುಳೇದ್, ವೆಂಕಟರಡ್ಡಿ ಅಬ್ಬೆತುಮಕೂರ, ಗೋಪಾಲ ದಾಸನಕೇರಾ, ಹಣಮಂತ ಇಟಗಿ, ಶ್ರೀದೇವಿ, ನಾಗಪ್ಪ ಗಚ್ಚಿನಮನಿ, ಸಾಯಿಬಣ್ಣ ಗಣಪುರ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

