ಎಂಎಲ್ಸಿ ವಿಠಲ ಹೇರೂರ್ ನಿಧನ
ಗುಲ್ಬರ್ಗ: ಕೋಲಿ ಸಮಾಜದ ನಾಯಕ ಹಾಗೂ ವಿಧಾನ ಪರಿಷತ್ತಿನ ಮಾಜಿ ಮುಖ್ಯ ಸಚೇತಕ ವಿಠಲ ಹೇರೂರ್ (61) ಮಂಗಳವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಿಧನರಾದರು. ಕೋಲಿ ಸಮಾಜದ ನಾಡಿಮಿಡಿತವಾಗಿರುವ ಹೇರೂರ್ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಬೆಳಗ್ಗೆ ಗುಲ್ಬರ್ಗದಲ್ಲಿ ಸಾರ್ವಜನಿಕ ದರ್ಶನಕ್ಕಿಡಲಾಗಿತ್ತು. ನಂತರ ಶರೀರದ ಮೆರವಣಿಗೆ ಗಂಗಾ ನಗರದ ಮಾರ್ಗವಾಗಿ ಕೋರಿಮಠ, ಸೂಪರ್ ಮಾರ್ಕೆಟ್, ಕೇಂದ್ರ ಬಸ್ ನಿಲ್ದಾಣಗಳ ಮೂಲಕ ಅಫಜಲ್ಪುರ ತಾಲೂಕಿನ ದೇವಲಗಾಣಗಾಪುರಕ್ಕೆ ತೆರಳಿತು. ಬಡವರು ಬಂಧು, ಕೋಲಿ ಸಮಾಜದ ಕಣ್ಮಣಿ ಎಂದು ಸಾವಿರಾರು ಅಭಿಮಾನಿಗಳು ಮೆರವಣೆಗೆಯುದ್ದಕ್ಕೂ ಘೋಷಣೆಗಳನ್ನು ಕೂಗುತ್ತ ಸಾಗಿದರು. ನೆರೆದಿದ್ದ ಅಪಾರ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ದೇವಲಗಾಣಗಾಪುರದ ಸಂಗಮ ಮಾರ್ಗದಲ್ಲಿರುವ ತಿಪ್ಪಣ್ಣ ಕಂಠೆಪ್ಪ ಹೇರೂರ್ ಪ್ರೌಢಶಾಲಾ ಆವರಣದಲ್ಲಿರುವ 2.5 ಎಕರೆ ನಿವೇಶನದಲ್ಲಿ ಹೇರೂರ್ ಅವರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ ನೆರವೇರಲಿದೆ. ಅಂತ್ಯಕ್ರಿಯೆಗೂ ಮುನ್ನ ಕೋಲಿ ಸಮಾಜದ ಗುರುಗಳಾದ ಶಾಂತಕುಮಾರ್ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ವಿವಿಧ ಚಿಂತನಗೋಷ್ಠಿಗಳು ನಡೆಸಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

