ಗುಲ್ಬರ್ಗಾ

ಬಿಸಿಯೂಟ ನೌಕರರ ಮುಷ್ಕರ

Published On :

ಶಹಾಪುರ: ಕೇವಲ 38ಕ್ಕೆ ದುಡಿಸುವ ಸರ್ಕಾರದ ನೀತಿ ವಿರೋಧಿಸಿ ಕರ್ನಾಟಕ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ನೇತೃತ್ವದಲ್ಲಿ ಡಿ.2 ರಿಂದ ಅನಿರ್ಧಿಷ್ಟ ಮುಷ್ಕರ ನಡೆದಿದ್ದು, ಎಲ್ಲಾ ಬಿಸಿಯೂಟ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದು ಬಿಸಿಯೂಟ ಸ್ಥಗಿತಗೊಳ್ಳಲಿದೆ ಎಂದು ಅಕ್ಷರ ದಾಸೋಹದ ನೌಕರರ ಸಂಘದ ಅಧ್ಯಕ್ಷರಾದ ಸುನಂದ ಹಿರೇಮಠ, ಬಸ್ಸಮ್ಮ ತಡಿಬಿಡಿ, ದಾವಲ್ಬೀ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಖಾಸಗೀಕರಣದ ಭಾಗವಾಗಿ 40 ಸಾವಿರ ಮಹಿಳೆಯರು ಕೆಲಸ ಕಳೆದುಕೊಂಡಿದ್ದಾರೆ. ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪೂರಕವಾಗಿ ಕಾಣಿಕೆ ನೀಡುತ್ತಿರುವ ಬಿಸಿಯೂಟ ಯೋಜನೆಯನ್ನು ಖಾಸಗಿ ಸಂಘ ಸಂಸ್ಥೆಗಳಿಗೆ, ಕಾರ್ಪೋರೇಟ್ ಸಂಸ್ಥೆಗಳಿಗೆ ನೀಡಿರುವುದನ್ನು ವಾಪಸ್ಸು ಪಡೆಯಬೇಕು, ಬಿಸಿಯೂಟ ಯೋಜನೆಗಳನ್ನು ಕಾರ್ಪೋರೇಟ್ ಸಂಸ್ಥೆಗಳಿಗೆ ವಹಿಸಿಕೊಡುವ ಸರ್ಕಾರದ ಪ್ರಯತ್ನ ಕೂಡಲೇ ನಿಲ್ಲಬೇಕು.
ಬಿಸಿಯೂಟ ನೌಕರರಿಗೆ ಕನಿಷ್ಟ ಕೂಲಿ ಮತ್ತು ಅಗತ್ಯ ಸೇವಾ ಸೌಲಭ್ಯಗಳನ್ನು ನೀಡಿ, ಬಿಸಿಯೂಟ ಸಂಪೂರ್ಣ ಜವಾಬ್ದಾರಿಯನ್ನು ಯೋಜನೆಯ ಅಧಿಕಾರಿಗಳಿಗೆ ಮತ್ತು ಅಡುಗೆ ಸಿಬ್ಬಂದಿಗೆ ನೀಡಬೇಕು. ಇದರಿಂದ ಶಿಕ್ಷಕರ ಬಿಸಿಯೂಟದ ಜವಾಬ್ದಾರಿ ಕಡಿಮೆ ಮಾಡಬಹುದು ಮತ್ತು ಪ್ರತಿ ತಿಂಗಳು ಅಡುಗೆಯವರಿಗೆ ತರಬೇತಿ ಶಿಬಿರ ನಡೆಸಬೇಕು, ಹಾಜರಾತಿ ಆಧಾರದಲ್ಲಿ ಕಳೆದ 11 ವರ್ಷಗಳಿಂದ ಕೆಲಸ ಮಾಡುತ್ತಿರುವ ಅಡುಗೆ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯುವ ಕ್ರಮ ನಿಲ್ಲಬೇಕು.
ಹಾಜರಾತಿ ಆಧಾರದಲ್ಲಿ ಶಾಲೆಗಳನ್ನು ವಿಲೀನಗೊಳಿಸುವಾಗ ಶಿಕ್ಷಕರನ್ನು ವರ್ಗಾವಣೆ ಮಾಡುವ ಹಾಗೆ ಅಡುಗೆಯವರನ್ನು ಹತ್ತಿರದ ಶಾಲೆಗಳಿಗೆ ವರ್ಗಾವಣೆ ಮಾಡಿ, ಬರಗಾಲದಲ್ಲಿ ಹಾಗೂ ವಿಶೇಷ ರಜಾ ದಿನಗಳಲ್ಲಿ ಕೆಲಸ ಮಾಡಿದರೆ ದುಪ್ಪಟ್ಟು ವೇತನ ನೀಡಬೇಕು. ರೋಸ್ಟರ್ ಪದ್ಧತಿ ಪ್ರಕಾರ ಕೆಲವೆಡೆ ಹಿಂದುಳಿದ ಮಹಿಳೆಯರಿಗೆ ಆದ್ಯತೆಯ ನೆಪದಲ್ಲಿ 11 ವರ್ಷಗಳಿಂದ ಕೆಲಸ ಮಾಡಿದವರನ್ನು ಕೆಲಸದಿಂದ ತೆಗೆಯುವ ಕ್ರಮ ನಿಲ್ಲಬೇಕೆಂದು ಮುಷ್ಕರ ನಿರತರು ತಿಳಿಸಿದ್ದು, ಸಮಸ್ತ ಅಡುಗೆ ಸಿಬ್ಬಂದಿ ಬಿಸಿಯೂಟ ತಯಾರು ಮಾಡುವುದನ್ನು ಸ್ಥಗಿತಗೊಳಿಸಿ ಪ್ರತಿಭಟಿಸಬೇಕು ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.