ಬಡವರ ಅಕ್ಷಯ ಪಾತ್ರೆ ಆಹಾರ ಭದ್ರತಾ ಯೋಜನೆ
ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಡಿ.6
ಸರ್ಕಾರದ ಆಹಾರ ಭದ್ರತಾ ಯೋಜನೆಯು ಬಡವರ ಪಾಲಿಗೆ ಅಕ್ಷಯ ಪಾತ್ರೆ ಆಗಲಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಪ್ಪಣ್ಣ ಸಿರಸಗಿ ಅಭಿಪ್ರಾಯಪಟ್ಟರು.
ಭಾರತ ಸರ್ಕಾರದ ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಗ್ರಾಪಂ ಸಣ್ಣೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಪೌಷ್ಟಿಕತೆ ನಿವಾರಣೆಗೆ ಕ್ರಮ: ಈ ಭಾಗದ ಜನರಲ್ಲಿ ಅದರಲ್ಲಿಯೂ ಮಕ್ಕಳು ಹಾಗೂ ಗರ್ಭಿಣಿ ಬಾಣಂತಿಯರಲ್ಲಿ ಅಪೌಷ್ಟಿಕತೆ ಹೆಚ್ಚಾಗಿ ಕಂಡುಬರುತ್ತಿದ್ದು, ಇದರ ನಿವಾರಣೆಗಾಗಿ ಸರ್ಕಾರ ಈಗಾಗಲೇ ಬಿಪಿಎಲ್, ಅಂತ್ಯೋದಯ ಪಡಿತರದಾರರಿಗೆ ಕೇವಲ 1ರ ದರದಲ್ಲಿ 3 ಜನ ಕುಟುಂಬದ ಸದಸ್ಯರಿದ್ದಲ್ಲಿ 30 ಕೆಜಿ ಅಕ್ಕಿ ವಿತರಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಜೋಳ, ಗೋದಿ, ರಾಗಿ ಮುಂತಾದ ಧಾನ್ಯಗಳನ್ನು ಕಡಿಮೆ ದರದಲ್ಲಿ ವಿತರಿಸುವ ಗುರಿಯನ್ನು ಹೊಂದಿದೆ ಎಂದರು.
ಸದುಪಯೋಗ ಪಡೆಯಲು ಕರೆ: ಕೇಂದ್ರ ಸರ್ಕಾರ ಸಹ ಹೆಚ್ಚುವರಿಯಾಗಿ ಪೌಷ್ಟಿಕ ಆಹಾರ ಧಾನ್ಯಗಳನ್ನು ಕಡಿಮೆ ದರದಲ್ಲಿ ಅಂದರೆ 2 ಮತ್ತು 3ರ ದರದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅಡಿ ಪೂರೈಕೆ ಮಾಡಲಿದೆ. ಇದರ ಸದುಪಯೋಗವನ್ನು ಗ್ರಾಮೀಣ ಜನತೆ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಾಪಮ್ಮ ಹಾಬಳಕರ್, ಮೇಲ್ವಿಚಾರಕಿ ರಾಜೇಶ್ವರಿ ಬಿರಾದಾರ ಉಪಸ್ಥಿತರಿದ್ದರು. ಜಿಪಂ ಸದಸ್ಯರಾದ ಹೇಮಾವತಿ ಲಿಂಗಣ್ಣ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗ್ರಾಪಂ ಸದಸ್ಯೆ ಜಗದೇವಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತರ ಪ್ರಚಾರ ಸಹಾಯಕ ಎನ್. ರಾಮಕೃಷ್ಣ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕ ರಾಜಣ್ಣ ಪಾಟೀಲ್ ವಂದಿಸಿದರು.
ಕಾರ್ಯಕ್ರಮದ ಅಂಗವಾಗಿ ಗ್ರಾಮೀಣ ಮಹಿಳೆಯರಿಗೆ ಕ್ರೀಡಾ ಸ್ಪರ್ಧೆಯನ್ನು ಆಯೋಜಿಸಿದ್ದು ವಿಜೇತರಿಗೆ ಕ್ಷೇತ್ರ ಪ್ರಚಾರ ನಿರ್ದೇಶನಾಲಯ ಗುಲ್ಬರ್ಗ ವತಿಯಿಂದ ಬಹುಮಾನಗಳನ್ನು ವಿತರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

