ಸೇನೆ ಸೇರಲು ಯುವಕರು ಮುಂದೆ ಬರಲಿ
ಗುಲ್ಬರ್ಗ: ಯುವಕ-ಯುವತಿಯರು ಸೇನಾ ಬಲದಲ್ಲಿ ಭರ್ತಿಯಾಗಿ ದೇಶಕ್ಕೆ ತಮ್ಮ ಅಮೂಲ್ಯ ಸೇವೆ ಸಲ್ಲಿಸಲು ಅನುಕೂಲವಾಗುವ ಹಾಗೇ ಅವರಲ್ಲಿ ಮನೋಬಲ ಮತ್ತು ಪ್ರೇರಣೆ ಬೆಳೆಸುವುದು ಎಲ್ಲರ ಜವಾಬ್ದಾರಿ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಸಹಾಯ ಮಾಡುವುದು ಎಂದು ಜಿಲ್ಲಾಧಿಕಾರಿ ಡಾ. ಎನ್.ವಿ.ಪ್ರಸಾದ್ ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಅಂಗವಾಗಿ ಸಶಸ್ತ್ರ ಪಡೆಗಳ ಧ್ವಜವನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ಸಿಂಗ್ ಮಾತನಾಡಿ, ಪೊಲೀಸ್ ಇಲಾಖೆಯಲ್ಲೂ ಸಹ ಪೊಲೀಸ್ ಧ್ವಜ ದಿನಾಚರಣೆ ಮಾಡಲಾಗುತ್ತದೆ. ವಿವಿಧ ಇಲಾಖೆಗಳು ಹಾಗೂ ನಾಗರಿಕರು ಧ್ವಜಕ್ಕೆ ನೀಡುವ ಚಂದಾ ಹಣದಲ್ಲಿ 50 ಪ್ರತಿಶತ ಕೇಂದ್ರಕ್ಕೆ ನೀಡಲಾಗುತ್ತದೆ. ಇನ್ನುಳಿದ ಅರ್ಧ ಹಣದಲ್ಲಿ ನಿವೃತ್ತ ಪೊಲೀಸ್ ಹಾಗೂ ಮೃತ ಪೊಲೀಸರ ಕುಟುಂಬದ ಸಹಾಯಕ್ಕೆ ಬಳಸಲಾಗುತ್ತಿದೆ. ಈ ಹಣವು ಹೆಚ್ಚಿಗೆ ಸಂಗ್ರಹವಾದಲ್ಲಿ ಅನುಕೂಲವಾಗುವುದು ಎಂದರು.
ಮಾಜಿ ಸೈನಿಕ ಬಸವರಾಜ ಮಾತನಾಡಿ, ಗುಲ್ಬರ್ಗ ಜಿಲ್ಲೆಯಲ್ಲಿ ಸುಮಾರು 900 ಮಾಜಿ ಸೈನಿಕರಿದ್ದಾರೆ. ಅವರಿಗೆ ಕ್ಯಾಂಟೀನ್, ಸೈನಿಕ ಭವನ ಹಾಗೂ ಮಾಜಿ ಸೈನಿಕರಿಗೆ ಉಚಿತ ನಿವೇಶನಗಳನ್ನು ಒದಗಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗುಲ್ಬರ್ಗ ಜಿಲ್ಲಾ ಸೈನಿಕ ಮಂಡಳಿ ಉಪಾಧ್ಯಕ್ಷ ಕರ್ನಲ್ ಕಾಪಟೆ ರಾಜಶೇಖರ, ನಿವೃತ್ತ ಸೈನಿಕ ಅಧಿಕಾರಿ ಕರ್ನಲ್ ತಾಂಬರೆ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ದೊಡ್ಡಪ್ಪ ಹೂಗಾರ, ವ್ಯವಸ್ಥಾಪಕ ಕೃಷ್ಣಾ ಕೆ. ಜಿಲ್ಲಾಮಟ್ಟದ ಅಧಿಕಾರಿಗಳು, ಮಾಜಿ ಸೈನಿಕರು ಹಾಗೂ ಇತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

