ಗುಲ್ಬರ್ಗಾ

ವಾಡಿ: ಬಿಜೆಪಿ ವಿಜಯೋತ್ಸವ

Published On :

ಗುಲ್ಬರ್ಗ: 4 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ವಾಡಿಯ ಡಾ. ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
 ಮಾಜಿ ಶಾಸಕ ವಾಲ್ಮೀಕಿ ನಾಯಕ ಮಾತನಾಡಿ, ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರ ಪರ ಬೀಸಿದ ಗಾಳಿಗೆ ಕಾಂಗ್ರೆಸ್ ಪಕ್ಷ ಕೊಚ್ಚಿಕೊಂಡು ಹೋಗಿದೆ. ಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂಬುದಕ್ಕೆ 4 ರಾಜ್ಯಗಳ ಚುನಾವಣಾ ಫಲಿತಾಂಶ ಸಾಕ್ಷಿಯಾಗಿದೆ. ಮೋದಿ ಪ್ರಧಾನ ಮಂತ್ರಿಯಾಗಿ ದೇಶವನ್ನು ಪ್ರಗತಿಪಥತ್ತ ಕೊಂಡೊಯ್ಯಲಿದ್ದಾರೆ ಎಂದು ಹೇಳಿದರು. ಬಿಜೆಪಿ ಮುಖಂಡ ಅಶೋಕ ಸೂರ್ಯವಂಶಿ, ರಾಮಚಂದ್ರ ರೆಡ್ಡಿ, ಜೋಗೇಂದ್ರ ಸಿಂಗ್ ವಾಲಿಯ, ಫರತಪ್ಪಕರದಳಿ, ಮಲ್ಲೇಶಿ ಭಂಡಾರಿ, ಠಾಕೂರ ಸಿಂಗ್, ಬಸವರಾಜ ಕಟಮಳ, ಶಕ್ತಿ ಕೇಂದ್ರದ ಅಧ್ಯಕ್ಷ ಹರಿ ಗಲಾಂಡೆ, ರಾಜೇಶ ಕಾಂಬಳೆ, ಸುನೀಲ್‌ರಾಠೋಡ, ವೀರಣ್ಣ ಯಾರಿ, ಹಣಮಂತ ಚವ್ಹಾಣ, ಪುರಸಭೆ ಸದಸ್ಯ ಭಗವತ ಸೂಳೆ, ಕಿಶನ ಜಾಧವ, ಅಶೋಕ ಬಾಜಿರಾವ, ಹರಿ ಜಾಧವ, ಅಂಬಾದಾಸ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.