ಗುಲ್ಬರ್ಗಾ

ಕಳಪೆ ಕಾಮಗಾರಿ: ಅಧಿಕಾರಿಗಳಿಗೆ ತರಾಟೆ

Published On :

ಗುಲ್ಬರ್ಗ: ಜಿಪಂ ಉಪಾಧ್ಯಕ್ಷೆ ಅನಿತಾ ವಳಕೇರಿ ತಾಲೂಕಿನ ಕಲಬೆನ್ನೂರ ಗ್ರಾಮಕ್ಕೆ ಭೇಟಿ ನೀಡಿ ಅಂಗನವಾಡಿ ಕೇಂದ್ರದ ಕಟ್ಟಡ ಪರಿಶೀಲಿಸಿ ಕಳಪೆಮಟ್ಟದ ಕಾಮಗಾರಿ ಆಗಿರುವುದನ್ನು ಗಮನಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಗ್ರಾಮಕ್ಕೆ ಶಿಶು ಅಭಿವೃದ್ಧಿ ಅಧಿಕಾರಿಗಳನ್ನು ಸ್ಥಳದಲ್ಲಿಯೇ ಕರೆಯಿಸಿ ಗ್ರಾಮಸ್ಥರ ಸಮ್ಮುಖದಲ್ಲಿ ಅಂಗನವಾಡಿ ಕಾರ್ಯಕರ್ತೆಗೆ ಹಾಗೂ ಅಧಿಕಾರಿಯವರಿಗೂ ತರಾಟೆಗೆ ತೆಗೆದುಕೊಂಡು ಮೇಲಾಧಿಕಾರಿಳಿಂದ ಈ ಕಳಪೆಮಟ್ಟದ ಕಾಮಗಾರಿ ಪರಿಶೀಲನೆ ಮಾಡಿಸಿ ಸಂಬಂಧಪಟ್ಟ ಅಧಿಕಾರಿಗಳು, ಕಟ್ಟಡ ಕಾಮಗಾರಿ ಮಾಡಿದ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಂಡು ಅವರ ಗುತ್ತಿಗೆ ಲೈಸೆನ್ಸ್ ರದ್ದುಪಡಿಸಲು ಹೇಳಲಾಗುವುದು ಎಂದರು.

ಸಂಗೀತದಿಂದ ಮಾನಸಿಕ ನೆಮ್ಮದಿ:ಶ್ರೀ
ಚಿತ್ತಾಪುರ: ಸಂಗೀತ ಕೇಳುವುದರಿಂದ ಮಾನಸಿಕ ನೆಮ್ಮದಿ ದೊರೆಯುತ್ತದೆ ಎಂದು ರಾವುರ ಸಿದ್ದಲಿಂಗೇಶ್ವರ ಮಠದ ಶ್ರೀಸಿದ್ದಲಿಂಗ ಸ್ವಾಮಿಗಳು ನುಡಿದರು. ಇಲ್ಲಿನ ರಾವುರ ಸಿದ್ದಲಿಂಗೇಶ್ವರ ಮಠದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಹಮ್ಮಿಕೊಂಡ ಜಾನಪದ ಸಂಗೀತ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಇಂದು ಆಧುನಿಕ ಭರಾಟೆಯಲ್ಲಿ ಕಳೆದು ಹೋಗುತ್ತಿರುವ ಜಾನಪದ ಸಾಹಿತ್ಯವನ್ನು ಉಳಿಸಲು ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳುವುದು ಅಗತ್ಯ ಎಂದು ಹೇಳಿದರು. ಜಿಪಂ ಮಾಜಿ ಸದಸ್ಯ ಡಾ.ಗುಂಡಣ್ಣ ಬಾಳಿ ಮಾತನಾಡಿ, ಸಂಗೀತ ಕಲಾವಿದರನ್ನು ಗುರುತಿಸುವ ಕಾರ್ಯ ಕನ್ನಡ ಸಂಸ್ಕೃತಿ ಇಲಾಖೆ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.