ಕೆಲಸಕ್ಕೆ ಸಮಾನ ವೇತನ: ಜ.12ರಂದು ಸಮಾವೇಶ
ಕನ್ನಡಪ್ರಭ ವಾರ್ತೆ ಚಿತ್ತಾಪುರ ಡಿ.9
ಸಮಾನ ಕೆಲಸಕ್ಕೆ ಸಮಾನ ವೇತನ ಮತ್ತು ವೇತನ ತಾರತಮ್ಯ ನಿವಾರಣೆ ಅಲ್ಲದೆ ಹೈ.ಕ. ವ್ಯಾಪ್ತಿಯ 25 ಸಾವಿರ ವಿವಿಧ ಹುದ್ದೆಗಳ ಭರ್ತಿ ಹಾಗೂ ಮುಂಬಡ್ತಿಯಲ್ಲಿ ಅನ್ಯಾಯವಾಗುತ್ತಿರುವುದರ ಕುರಿತು ಜ. 12 ರಂದು ಗುಲ್ಬರ್ಗದ ಕನ್ನಡ ಭವನದಲ್ಲಿ ವಿಚಾರ ಸಂಕಿರಣ ಮತ್ತು ಶೈಕ್ಷಣಿಕ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಈಶಾನ್ಯ ವಲಯದ ಶಿಕ್ಷಕರ ವೇದಿಕೆ ಅಧ್ಯಕ್ಷ ಎಂ.ಬಿ ಅಂಬಲಗಿ ಹೇಳಿದರು.
ಪಟ್ಟಣದ ಸರ್ಕಾರಿ ಕನ್ಯಾ ಪ್ರೌಢಶಾಲೆಯಲ್ಲಿ ಸಮಾವೇಶದ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ನೆರೆಯ ಮಹಾರಾಷ್ಟ್ರ, ಕೇರಳ, ತಮಿಳುನಾಡು, ಆಂಧ್ರ ರಾಜ್ಯ ಸರ್ಕಾರಕ್ಕೂ ನಮ್ಮ ಸರ್ಕಾರ ನೀಡುವ ವೇತನ ಶ್ರೇಣಿಗೂ ತುಂಬಾ ವ್ಯಾತ್ಯಾಸವಿದೆ. ಅದನ್ನು ಸರಿಪಡಿಸಿ ಕೇಂದ್ರ ಸರ್ಕಾರದ ವೇತನ ಶ್ರೇಣಿ ನೀಡಬೇಕು ಎಂದು ಒತ್ತಾಯಿಸಿದರು.
ಹೈ. ಕ. ಭಾಗಕ್ಕೆ 371(ಜೆ) ಜಾರಿಯಾಗಿದ್ದು, ಖಾಲಿ ಇರುವ 25 ಸಾವಿರದಷ್ಟು ಹುದ್ದೆಗಳ ನೇಮಕಕ್ಕೆ ಕ್ರಮ ಕೈಗೊಳ್ಳಬೇಕು, ಶಿಕ್ಷಕ, ಉಪನ್ಯಾಸಕರಿಗೆ ಮುಂಬಡ್ತಿಯಲ್ಲಿ ಹೆಚ್ಚಿನ ಅನ್ಯಾಯವಾಗುತ್ತಿದ್ದು, ಈ ಅನ್ಯಾಯ 371 ಕಲಂ ಅನ್ವಯ ಸರಿಪಡಿಸಬೇಕು ಎಂದು ಒತ್ತಾಯಿಸಿದರು.
ಶಿಕ್ಷಕರ ಸಮಸ್ಯೆಗಳು ಮತ್ತು ಡಿಇಡಿ, ಬಿಇಡಿ ಪದವೀಧರರ ಮತ್ತು ಸ್ನಾತಕೋತ್ತರ ಪದವೀಧರರು ಮತ್ತು ಸರ್ಕಾರಿ ಅನುದಾನಿತ ಖಾಸಗಿ ಶಿಕ್ಷಕರು ಮತ್ತು ಉಪನ್ಯಾಸಕರು, ಅನುದಾನರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರು ಮುಂತಾದ ಶಾಲಾ ಕಾಲೇಜುಗಳ ಶಿಕ್ಷಕ ಉಪನ್ಯಾಸಕರು ಈ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಸಮಾವೇಶ ಯಶಸ್ವಿಗೊಳಿಸಬೇಕೆಂದು ಎಂ.ಬಿ. ಅಂಬಲಗಿ ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

