ಹೆಬ್ಬಾಳ ಗ್ರಾಪಂಗೆ ಬೀಗ ಮುದ್ರೆ: ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಹುಣಸಗಿ ಡಿ.10
ಸಮೀಪದ ಹೆಬ್ಬಾಳ (ಬಿ.) ಗ್ರಾಮ ಪಂಚಾಯ್ತಿಗೆ ದಲಿತ ಸಂಘರ್ಷ ಸಮಿತಿ ವತಿಯಿಂದ ಬೀಗ ಮುದ್ರೆ ಹಾಕಿ ಪ್ರತಿಭಟನೆ ನಡೆಸಲಾಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಹುಣಸಗಿ ಹೋಬಳಿ ಡಿಎಸ್ಎಸ್ ಸಂಚಾಲಕ ಪ್ರಭು ಕಚಕನೂರ, ಕಲ್ಲದೇವನಹಳ್ಳಿ ಗ್ರಾಮದಲ್ಲಿರುವ ಗಾಂವಠಾಣದ ಸ್ಥಳದಲ್ಲಿ ಅನಧಿಕೃತ ಕಟ್ಟಡ ನಿರ್ಮಿಸುತ್ತಿರವುದನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟಿಸಿದರು.
ಕಲ್ಲದೇವನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬರು ಅನಧಿಕೃತ ಕಟ್ಟಡ ನಿರ್ಮಿಸುತ್ತಿರುವುದು ಕಂಡು ಬಂದಿದ್ದಿರು ಗ್ರಾಪಂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂದು ಕಿಡಿ ಕಾರಿದರು. ಅಕ್ರಮ ಕಟ್ಟಡ ನಿರ್ಮಿಸುತ್ತಿರುವ ಹಾಗೂ ಸಹಕರಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಮಾತನಾಡಿದರು. ಕಲ್ಲದೇವನಹಳ್ಳಿಯ ಎಸ್ಸಿ ವಾರ್ಡ್ನಲ್ಲಿ ರಸ್ತೆ ಅಗಲಿಕರಣಗೊಳಿಸಿ ಸಿಸಿ ರಸ್ತೆ ನಿರ್ಮಿಸಬೇಕು. ಸ್ತ್ರೀಯರಿಗೆ ಸುಲಭ ಶೌಚಾಲಯ, ಹೆಬ್ಬಾಳ (ಬಿ.) ಮತ್ತು ಕಲ್ಲದೇವನಹಳ್ಳಿ ಗ್ರಾಮದ ಎಸ್ಸಿ ವಾರ್ಡ್ನಲ್ಲಿ ಅಂಬೇಡ್ಕರ್ ಭವನ, ಪಂಚಾಯತ್ ವ್ಯಾಪ್ತಿಯಲ್ಲಿ ಎನ್ಎಮ್ಆರ್ಜಿಎ ಯೋಜನೆಯಲ್ಲಿ ಎಸ್ಸಿ ಮತ್ತು ಎಸ್ಟಿ ಜನರಿಗೆ ಆದ್ಯತೆ ನೀಡಬೇಕೆಂದು ಅಗ್ರಹಿಸಲಾಯಿತು.
ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಜಿಪಂ ಯಾದಗಿರಿ ಅವರಿಗೆ ಬರದೆ ಮನವಿ ಪತ್ರವನ್ನು ಸುರಪುರ ತಾಪಂ ಕಾರ್ಯ ನಿರ್ವಾಹಣಾಧಿಕಾರಿ ಪ್ರಭಯ್ಯ ಹಿರೇಮಠ ಸ್ವೀಕರಿಸಿದರು. ನಂತರ ಮಾತನಾಡಿ, ಅವರು ಶೀಘ್ರದಲ್ಲಿಯೇ ಅಗತ್ಯ ಕ್ರಮ ಕೈಗೊಳ್ಳವುದಾಗಿ ಭರವಸೆ ಮೇರೆಗೆ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ಪ್ರತಿಭಟನೆಯಲ್ಲಿ ಡಿಎಸ್ಎಸ್ ರಾಜ್ಯ ಸಂಚಾಲಕ ನಾಗಣ್ಣ ಕಲ್ಲದೇವನಹಳ್ಳಿ, ಭೀಮರಾಯ ಸಿಂದಗೇರಿ, ರಾಮಣ್ಣ ಕಲ್ಲದೇವನಹಳ್ಳಿ, ಬಸವರಾಜ ಹಾದಿಮನಿ, ರಾಹುಲ್ ಹುಲಿಮನಿ, ಯಮನಪ್ಪ ಕಟ್ಟಿಮನಿ, ಶಂಕರ ಬೊಮ್ಮನಳ್ಳಿ, ಮಲ್ಲಿಕಾರ್ಜುನ, ಹೊನ್ನಪ್ಪ, ಕೆಂಚಪ್ಪ, ಶೇಖರ ಗೋಡಿಕಾರ ಸೇರಿದಂತೆ ಸಂಘಟನೆಯ ಮುಖಂಡರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

