ಕಾನೂನುಬಾಹಿರವಾಗಿ ಎಸ್ಟಿ ಪ್ರಮಾಣಪತ್ರ
ಕ.ಪ್ರ.ವಾರ್ತೆ ಚಿಂಚೋಳಿ ಡಿ. 10
ತಾಲೂಕಿನಲ್ಲಿ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರಗಳನ್ನು ಕಾನೂನು ಬಾಹಿರವಾಗಿ ಪಡೆಯುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಮಹರ್ಷಿ ವಾಲ್ಮಿಕಿ ನಾಯಕ ಸಂಘದ ಮುಖಂಡರು ತಹಸೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಮಾರುತಿ ಜಮಾದಾರ ಮಾತನಾಡಿ, ತಾಲೂಕಿನಲ್ಲಿ ಕುರುಬ ಜನಾಂಗದ ಜನರು ಕಾನೂನುಬಾಹಿರವಾಗಿ ಪರಿಶಿಷ್ಟ ಪಂಗಡ (ಎಸ್ಟಿ) ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದು, ನಿಜವಾದ ಪರಿಶಿಷ್ಟ ಪಂಗಡಕ್ಕೆ ಸೇರಿದ ಮೀಸಲಾತಿ ಸೌಲಭ್ಯಕ್ಕೆ ಅರ್ಹವಾದ ಜನರಿಗೆ ವಂಚನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಅವಕಾಶ ಇಲ್ಲ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಜಾತಿ ಪ್ರಮಾಣ ಪತ್ರ ನೀಡಲು ಕೇಂದ್ರ ಸರ್ಕಾರವು ಸಮೀಕ್ಷೆ ಮೂಲಕ ಸಂಬಂಧಿಸಿದ ಜನಾಂಗಗಳನ್ನು ಗುರುತಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅರ್ಹರೆಂದು ಗುರುತಿಸಿ ಕೇಂದ್ರ ಸರ್ಕಾರವು ಜಾತಿಗಳ ಪಟ್ಟಿ ಮಾಡಿ ಆದೇಶ ಹೊರಡಿಸಿದೆ. ಆದರೆ, ಕೇಂದ್ರ ಸರ್ಕಾರ ಹೊರಡಿಸಿದ ಆದೇಶದಲ್ಲಿ ಕುರುಬ ಜನಾಂಗಕ್ಕೆ ಅವಕಾಶ ನೀಡಿರುವುದಿಲ್ಲ ಎಂದರು.
ಉಳಿದ ಜಿಲ್ಲೆಯಲ್ಲಿರುವ ಕುರುಬ ಜನಾಂಗದ ಜಾತಿಯವರು ಕಾಡು ಕುರುಬ, ಜೇನು ಕುರುಬ, ಗೊಂಡ, ರಾಜಗೊಂಡ ಜನಾಂಗದವರೆಂಬ ಸುಳ್ಳು ದಾಖಲೆ ಸೃಷ್ಟಿಸಿ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ಪಡೆದಿದ್ದು ಹಾಗೂ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದರು.
ಲಾಲು ಪ್ರಸಾದ ನಿಡಗುಂದಾ, ರಾಜು ನಾಯಕ, ಈರಪ್ಪ ನಾಯಕ, ಸಂಜೀವ, ಗೋವಿಂದ ಎಂಪಳ್ಳಿ, ರಾಜೇಂದ್ರ, ವಿಶ್ವನಾಥ ನಾಯಕ, ಮಹೇಶ, ಕಾಶಿನಾಥ ಗೋಸುಲ್, ಸಿದ್ದಪ್ಪ ಎಂಪಳ್ಳಿ, ಸಿದ್ದಪ್ಪ ಬಡಿಗೇರ, ಮಾರುತಿ, ಅಣ್ಣೆಪ್ಪ, ವೀರಪ್ಪ ನಾಯಕ, ಕಾಶಿನಾಥ ಅಂತಾವರಂ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

