ಗುರುಮಠಕಲ್ ಪಟ್ಟಣಕ್ಕೆ ಇಂದಿನಿಂದ ಭೀಮೆ ನೀರು
ಗುರುಮಠಕಲ್: ಗುರುಮಠಕಲ್ ಮತಕ್ಷೇತ್ರದ ವ್ಯಾಪ್ತಿಯ 27 ಹಳ್ಳಿಗಳಿಗೆ ಶುದ್ಧ ಕುಡಿವ ನೀರು ಸರಬರಾಜು ಯೋಜನೆ ಡಿ. 13ರಿಂದ ಭೀಮ ನದಿಯ ನೀರು ಸರಬರಾಜು ಆಗಲಿದೆ.
ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ನೀರು ಸರಬರಾಜು ಯೋಜನೆಗೆ ನ.20ರಂದು ಚಾಲನೆ ನೀಡಿದ್ದರು. ಈ ಯೋಜನೆಗೆ ಸುಮಾರು 32 ಕೋಟಿಯನ್ನು 2007-08ನೇ ಸಾಲಿನಲ್ಲಿ ಹಣ ಬಿಡುಗಡೆ ಮಾಡಲಾಗಿತ್ತು. ಪರಿಣಾಮವಾಗಿ ಕಾಮಗಾರಿಗೆ ಹಣ ಬಿಡುಗಡೆಯಾಗಿ ಸುಮಾರು ಐದು ವರ್ಷಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಂಡು ಈ ಭಾಗದ ಜನತೆಯ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರೆಯುವ ಸಾಧ್ಯತೆ ಇದೆ.
ಬೃಹತ್ ಯೋಜನೆ: ರಾಜ್ಯದ 30 ಜಿಲ್ಲೆಗಳಲ್ಲಿ ಎಲ್ಲಿಯೂ ಇಲ್ಲದ ಬೃಹತ್ ಯೋಜನೆ ಗುರುಮಠಕಲ್ ಮತಕ್ಷೇತ್ರದಲ್ಲಿ ನಡೆದಿದೆ.
ಸುಮಾರು 27 ಗ್ರಾಮದ ಜನತೆಗೆ ಶುದ್ಧವಾದ ಕುಡಿಯುವ ನೀರು ದೊರೆಯುವುದಕ್ಕಾಗಿ ಭೀಮ ನದಿಯಿಂದ 45 ಕಿ.ಮೀ. ದೂರದಲ್ಲಿರುವ ಗುರುಮಠಕಲ್ ಪಟ್ಟಣಕ್ಕೆ ಪೈಪ್ಲೆ ಲೈನ್ ಮೂಲಕ ಶುದ್ಧಕುಡಿಯುವ ನೀರು ಪೂರೈಸುವ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ.
ಶುದ್ಧ ಕುಡಿವ ನೀರು: 45 ಕಿ.ಮೀ. ದೂರದಿಂದ ಕುಡಿಯುವ ನೀರು ಸರಬರಾಜು ಇಂದಿನಿಂದ ಪ್ರಾರಂಭವಾಗಲಿದೆ. ಇದಕ್ಕಾಗಿ 3 ಕಡೆ ನೀರು ಎತ್ತುವ ಕೇಂದ್ರಗಳನ್ನು ನಿರ್ಮಾಣ ಮಾಡಿದ್ದು, ಭೀಮನದಿ ಹತ್ತಿರ ಒಂದು ಮತ್ತು ಅರಕೇರಾ ಬಳಿ ಹಾಗೂ ಚಿನ್ನಕರ್ ಈ ಕೇಂದ್ರಗಳ ಮೂಲಕ ಗುರುಮಠಕಲ್ಗೆ ಹಾಗೂ 27 ಹಳ್ಳಿಗಳಿಗೆ ನೀರು ಸರಬರಾಜು ಆಗಲಿದೆ. ಈ ಯೋಜನೆಯಿಂದ ಪಟ್ಟಣಕ್ಕೆ ದಿನವೊಂದಕ್ಕೆ 54.30 ಲಕ್ಷ ಲೀಟರ್ ಶುದ್ಧ ಕುಡಿವ ನೀರು ಸರಬರಾಜು ಆಗಲಿದೆ.
ಮುಂದಿನ ದಿನಗಳಲ್ಲಿ ಪಟ್ಟಣಕ್ಕೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ ಎಂದು ಪಟ್ಟಣ ಪಂಚಾಯತಿ ಮುಖ್ಯಧಿಕಾರಿ ರವೀಂದ್ರ ವೈ ಲಂಬು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

