ಗುಲ್ಬರ್ಗಾ

'ನಡೆಯದ ಮಕ್ಕಳ ಹಕ್ಕುಗಳ ಗ್ರಾಮಸಭೆ'

Published On :

ಯಾದಗಿರಿ: ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆಯನ್ನು ನವೆಂಬರ್ ತಿಂಗಳಲ್ಲಿ ಕಡ್ಡಾಯವಾಗಿ ನಡೆಸಬೇಕೆಂದು ಆದೇಶವಿದ್ದರು ಸಂಬಂಧಪಟ್ಟ ಅಧಿಕಾರಗಳು ನಡೆಸದೇ, ಅನೇಕ ಮಕ್ಕಳು ತಮ್ಮ ಹಕ್ಕುಗಳಿಂದ ವಂಚಿತರಾಗಿ ಶಾಲೆ ಬಿಟ್ಟು ಬಾಲಕಾರ್ಮಿಕತೆ, ಜೀತ ಪದ್ಧತಿಯಲ್ಲಿ ಇರುವುದು ಕಳವಳಕಾರಿ ಸಂಗತಿ ಎಂದು ಜಾಗೃತಿ ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಗೌರವಧ್ಯಕ್ಷೆ ನಾಗರತ್ನ ಮೂರ್ತಿ ಅನಪೂರ ಹೇಳಿದರು.
ನಗರದ ಜಾಗೃತಿ ಜಿಲ್ಲಾ ಕಾರ್ಯಲಯದಲ್ಲಿ ಕಿರಣ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆಯಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತ ಭಿತ್ತಿಪತ್ರ ಬಿಡುಗಡೆ ಮಾಡಿ ಮಾತನಾಡಿದರು. ಮಕ್ಕಳ ಹಕ್ಕುಗಳ ಒಡಂಬಡಿಕೆ ಕುರಿತು ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ನವೆಂಬರ್ 20-1989ರಲ್ಲಿ ಅಂಗೀಕರಿಸಿ, ಭಾರತ ಸರ್ಕಾರವು ಅದನ್ನು 1992 ಅಂಗೀಕರಿಸಿದರು, ಅದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಎಲ್ಲಾ ಸರ್ಕಾರಗಳು ವಿಫಲವಾಗಿವೆ ಎಂದರು.
ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಮಾತನಾಡಿದರು. ಈ ಸಂದರ್ಭದಲ್ಲಿ ಸೈದಪ್ಪ ಕೆ.ಗುತ್ತೆದಾರ, ಕಿರಣ ಸಂಸ್ಥೆಯ ಸಿದ್ದಪ್ಪ ಲಿಂಗೇರಿ, ಸಂಗಮೇಶ ಮಸಿಮಠ, ರಾಜಶೇಖರ ಆನೆಗುಂದಿ, ಚಂದ್ರಯ್ಯ ಗುತ್ತೆದಾರ,(ಜೆಪಿ) ಜಾಗೃತಿ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.