ತಾಲೂಕು ಕೇಂದ್ರಕ್ಕೆ ಆಗ್ರಹ
ಗುಲ್ಬರ್ಗ: ತಾಲೂಕಿನ ಮಹಾಗಾಂವ ಗ್ರಾಮವನ್ನು ತಾಲೂಕು ಕೇಂದ್ರ ಮಾಡುವಂತೆ ಕರ್ನಾಟಕ ಯುವ ಶಕ್ತಿ ಸೈನ್ಯದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಗ್ರಾಮವು ತಾಲೂಕು ಕೇಂದ್ರ ಆಗುವಂತಹ ಎಲ್ಲ ಅರ್ಹತೆಗಳನ್ನು ಹೊಂದಿದ್ದು, ಕೂಡಲೇ ತಾಲೂಕು ಕೇಂದ್ರವೆಂದು ಘೋಷಣೆ ಮಾಡಬೇಕು ಎಂದು ಲಿಂಗರಾಜ ಗುಂಡುರಕರ್ ಒತ್ತಾಯಿಸಿದರು. ಹೈ. ಕ. ಪ್ರದೇಶದಲ್ಲಿಯೇ ಮಹಾಗಾಂವ ಗ್ರಾಮವು ಅತಿ ದೊಡ್ಡ ಹೋಬಳಿಯಾಗಿದೆ.
ಹಳೆಯ ತಹಸೀಲ್ದಾರ್ ಕಚೇರಿ ಬಿಟ್ಟುಕೊಡಿ
ಜೇವರ್ಗಿ: ಈಗಿರುವ ಸ್ಥಳೀಯ ತಹಸೀಲ್ದಾರ್ ಕಚೇರಿಯನ್ನು ಮಿನಿವಿಧಾನ ಸೌಧಕ್ಕೆ ಸ್ಥಳಾಂತರಗೊಳಿಸಲಾಗುತ್ತಿದ್ದು, ಆ ಸ್ಥಳವನ್ನು ಶಿಕ್ಷಣ ಇಲಾಖೆ ಸುಪರ್ದಿಗೆ ಕೊಡಬೇಕೆಂದು ಕಾಂಗ್ರೆಸ್ ಮುಖಂಡ ಇಬ್ರಾಹಿಂ ಪಟೇಲ್ ಒತ್ತಾಯಿಸಿದ್ದಾರೆ. ಈಗಾಗಲೇ ಶಿಕ್ಷಣ ಇಲಾಖೆ ಕಾರ್ಯಾಲಯ ಚಿಕ್ಕದಾಗಿದ್ದರಿಂದ ತಾಲೂಕಿನ ಶಾಲಾ ಮಕ್ಕಳಿಗಾಗಿ ಬರುವ ಪಠ್ಯ ಪುಸ್ತಕ, ಸಮವಸ್ತ್ರ, ಬೈಸಿಕಲ್ ಸಂಗ್ರಹಕ್ಕಾಗಿ ಸ್ಥಳದ ಅಭಾವ ಎದುರಿಸುತ್ತಿದೆ. ಹೀಗಾಗಿ ಶಿಕ್ಷಣ ಇಲಾಖೆ ಎಲ್ಲ ಸಾಮಗ್ರಿಗಳನ್ನು ಸಂಗ್ರಹಿಸಲು ಗುರುಭವನ ಹಾಗೂ ಸ್ಥಳೀಯ ಶಾಲೆಗಳ ಕೊಣೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.
ಹಳೆಯ ತಹಸೀಲ್ದಾರ್ ಕಚೇರಿ ಶಿಕ್ಷಣ ಇಲಾಖೆಗೆ ಸೂಕ್ತ ಸ್ಥಳವಾಗಿದ್ದರಿಂದ ಆ ಸ್ಥಳವನ್ನು ಶಿಕ್ಷಣ ಇಲಾಖೆಗೆ ಒದಗಿಸಿದ್ದಲ್ಲಿ ಅನುಕೂಲವಾಗಲು ಸಾಧ್ಯ. ಆ ನಿಟ್ಟಿನಲ್ಲಿ ಶಾಸಕ ಡಾ. ಅಜಯಸಿಂಗ್ ಅವರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಇಬ್ರಾಹಿಂ ಪಟೇಲ್ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

