ಗುಲ್ಬರ್ಗಾ

ಮಕ್ಕಳ ಪ್ರತಿಭೆ ರಾಷ್ಟಮಟ್ಟಕ್ಕೆ ತಲುಪಿಸಿ

Published On :

ಕನ್ನಡಪ್ರಭ ವಾರ್ತೆ  ಚಿತ್ತಾಪುರ  ಡಿ.15
ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಶಿಕ್ಷಕರು ಗುರುತಿಸಿ ರಾಷ್ಟ್ರ ಮಟ್ಟಕ್ಕೆ ತಲುಪಿಸುವ ಕಾರ್ಯವನ್ನು ಶಿಕ್ಷಕರು ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಮೇಶ ಮರಗೋಳ ಸಲಹೆ ನೀಡಿದರು.
ತಾಲೂಕಿನ ತೆಂಗಳಿ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಂಡ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರಲ್ಲಿ ಪ್ರತಿಭೆ ಇರುತ್ತದೆ ಅದನ್ನು ಗುರುತಿಸುವ ಕಾರ್ಯ ಶಿಕ್ಷಕರು ಮಾಡಬೇಕು. ಇದಕ್ಕೆ ಪೋಷಕರು ಸಹಕಾರ ನೀಡಬೇಕು ಎಂದು ಹೇಳಿದರು.
ಸೋಲು- ಗೆಲವನ್ನು ಸಮಾನವಾಗಿ ಸ್ವೀಕರಿಸಿ: ಶಾಂತೇಶ್ವರ ಮಠದ ಡಾ. ಶ್ರೀಶಾಂತ ಸೋಮನಾಥ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಮಾತನಾಡಿ,  ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಗೆಲವು ಬಂದಾಗ ಹಿಗ್ಗದೆ, ಸೋಲು ಬಂದಾಗ ಕುಗ್ಗದೆ ಸೋಲು-ಗೆಲವು ಎರಡನ್ನೂ ಸಮ ಪ್ರಮಾಣದಲ್ಲಿ ಸ್ವೀಕರಿಸಬೇಕು ಎಂದು ಹೇಳಿದರು.
ಗ್ರಾಪಂ ಅಧ್ಯಕ್ಷ ಮಲ್ಲಪ್ಪ ಹೊಸಮನಿ ಇಂಗನಕಲ್ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜೊತೆ ಜೊತೆಗೆ ಪ್ರತಿಭೆ ಹೊರ ಹೊಮ್ಮಿಸುವ ಇಂತಹ ಕಾರ್ಯಕ್ರಮಗಳಿಗೆ ಉತ್ತೇಜನ ನೀಡಬೇಕು, ಪಾಲಕ ಪೋಷಕರು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅವುಗಳಿಗೆ ಪ್ರೋತ್ಸಾಹಿಸಬೆಕು ಎಂದರು.
ಕಾರ್ಯಕ್ರಮದಲ್ಲಿ ತಾಪಂ ಸದಸ್ಯೆ ಸುರೇಖಾ ಬಾಳದೆ, ಗ್ರಾಪಂ ಸದಸ್ಯರಾದ ಬಸವರಾಜ ತುಪ್ಪದ್, ಭೀಮಾಶಂಕರ ತೊನಸನಳ್ಳಿ, ಎಪಿಎಂಸಿ ಸದಸ್ಯ ಶಿವರಾಜ ಪಾಟೀಲ್, ಪ್ರಾಚಾರ್ಯ ಲಕ್ಷ್ಮಿಕಾಂತ ಖಣದಾಳಕರ್, ಕ.ರಾ.ಪ್ರಾ.ಶಿ.ಸಂಘದ ಕಾರ್ಯದರ್ಶಿ ವಿಜಯಕುಮಾರ್ ತೆಂಗಳಿ, ಮುಖಂಡ ವೀರಭದ್ಯಯ್ಯ ಸಾಲಿಮಠ, ಮುಖ್ಯಗುರು ಗಂಗಮ್ಮ ನಾಲವಾರ, ಸಿಆರ್‌ಸಿ ಜಗನ್ನಾಥ, ಅಂಗನವಾಡಿ ಕಾರ್ಯಕರ್ತೆ ಹೀರಾಬಾಯಿ ಪಾಟೀಲ್ ಹಾಗೂ ಸುತ್ತಮುತ್ತಲಿನ 8 ಶಾಲೆಯ ಮಕ್ಕಳು, ಶಿಕ್ಷಕರು, ಪಾಲಕ-ಪೋಷಕರು, ಗ್ರಾಮದ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹಣಮಂತ ಕಾರ್ಯಕ್ರಮ ನಿರೂಪಿಸಿದರು. ಶರಣಬಸಪ್ಪ ಡೊಣ್ಣೂರ್ ಸ್ವಾಗತಿಸಿದರು. ವೆಂಕಟೇಶ ಮರಗೋಳ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.