ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ
ಕ.ಪ್ರ. ವಾರ್ತೆ, ಜೇವರ್ಗಿ, ಡಿ.16
ತಾಲೂಕಿನ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರೈತ ಸಂಘ ತಾಲೂಕು ಸಮಿತಿ ನೇತೃತ್ವದಲ್ಲಿ ರೈತರು ಸೋಮವಾರ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಸುಭಾಷ ಹೊಸಮನಿ, ಅತಿವೃಷ್ಟಿಯಿಂದ ಹಾಳಾದ ಬೆಳೆಗಳಿಗೆ ಪರಿಹಾರ ನೀಡಬೇಕು, ತೊಗರಿ ಪ್ರತಿ ಕ್ವಿಂಟಲ್ 6450 ಬೆಂಬಲ ಬೆಲೆ ಘೋಷಿಸಬೇಕು, ರೈತರು ಬೆಳೆದ ಎಲ್ಲ ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.
ಅರ್ಜಿ ಸಲ್ಲಿಸಿದ ಬಡವರಿಗೆ ಸಾಮಾಜಿಕ ಭದ್ರತಾ ಯೋಜನೆಯಡಿ ಮಾಸಾಶನ ಮಂಜೂರು ಮಾಡಬೇಕು, ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ನಿರ್ವಹಿಸಿದ ಕೃಷಿ- ಕೂಲಿಕಾರರಿಗೆ ಬಾಕಿ ಉಳಿದ ಸಂಬಳ ಪಾವತಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.
ಇದಕ್ಕೂ ಮುನ್ನ ರೈತ ಸಂಘದ ಮುಖಂಡರು, ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರದಿಂದ ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ತಹಸೀಲ್ದಾರ್ ಮಲ್ಲಿಕಾರ್ಜುನರೆಡ್ಡಿ ಪಾಟೀಲ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ರೈತ ಮುಖಂಡ ವೆಂಕೋಬರಾವ ವಾಗಣಗೇರಿ, ಕಾರ್ಯದರ್ಶಿ ಸಿದ್ದರಾಮ ಹರವಾಳ, ಬಸಯ್ಯ ಹಿರೇಮಠ, ಮಲ್ಲಪ್ಪ ಮ್ಯಾಗೇರಿ, ರಸುಲ್ಸಾಬ್ ಮುಜಾವರ್, ಸಿದ್ದಪ್ಪ ಸಾಥಖೇಡ, ದಾವೂದ್ ಮುಜಾವರ್, ಶಿವರಾಜ ದೇಸಾಯಿ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಿಂದ ರೈತರು, ಕೃಷಿ ಕಾರ್ಮಿಕರು, ಮಹಿಳೆಯರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

