ಸೆಮಿಸ್ಟರ್ ಪದ್ಧತಿ ಕೈಬಿಡಲು ಆಗ್ರಹ
ಗುರುಮಠಕಲ್: ಐಟಿಐ ಕಾಲೇಜುಗಳಲ್ಲಿ ಪ್ರಸ್ತಕ ವರ್ಷದಿಂದ ಜಾರಿಗೊಳಿಸುತ್ತಿರುವ ಸೆಮಿಸ್ಟರ್ ಪದ್ಧತಿಯನ್ನು ಕೈಬಿಡುವಂತೆ ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಹಾಗೂ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಸಮಿತಿಗಳು ಜಂಟಿಯಾಗಿ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸರಿಯಾದ ಕ್ರಮವಲ್ಲ: ಒಂದು ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ಯಾವುದೇ ಒಂದು ಹೊಸ ಶಿಕ್ಷಣ ಪದ್ಧತಿಯನ್ನು ಜಾರಿಗೊಳಿಸುವ ಮೊದಲು ಎಲ್ಲಾ ಕಡೆಗಳಿಂದಲೂ ಅಂದರೆ ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು, ಕಾಲೇಜು ಉಪನ್ಯಾಸಕರ ಮಧ್ಯೆ ವ್ಯಾಪಕ ಚರ್ಚೆ ನಡೆಸಿ ಸಲಹೆ ಅಭಿಪ್ರಾಯಗಳನ್ನು ಸಂಗ್ರಹಿಸಬೇಕು. ಆದರೆ ಇದೀಗ ಸರ್ಕಾರ ಇವೆಲ್ಲವನ್ನೂ ಗಾಳಿಗೆ ತೂರಿ ಏಕಾಏಕಾ ಐಟಿಐ ವಿದ್ಯಾರ್ಥಿಗಳ ಮೇಲೆ ಸೆಮಿಸ್ಟರ್ಗಳನ್ನು ತಂದು ಹೇರಿದೆ. ಕ್ರಮ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸೃಜನಶೀಲತೆ: ಒಂದೆಡೆ ವಿದ್ಯಾರ್ಥಿಗಳನ್ನು ಪರೀಕ್ಷೆಯ ಗುಂಗಿನಲ್ಲಿ ಇರಿಸಿ, ಅವರಲ್ಲಿ ಸೃಜನಶೀಲತೆ, ಜ್ಞಾನಕ್ಕಾಗಿ ಹಂಬಲ, ವಿಷಯವನ್ನು ಆಳವಾಗಿ ಅರಿತುಕೊಳ್ಳುವಿಕೆ ಕುಗ್ಗಿ ಹೋಗುತ್ತದೆ.
ಇನ್ನೊಂದೆಡೆ ತರಬೇತಿ ಅಧಿಕಾರಿಗಳ್ನು ಪರೀಕ್ಷೆ, ಮೌಲ್ಯಮಾಪನದ ಒತ್ತಡದಲ್ಲಿ ಸಿಲುಕಿಸಿ ಉತ್ತಮವಾದ ತರಬೇತಿ ನೀಡಲು ಕಷ್ಟ ಸಾಧ್ಯವಾಗುತ್ತದೆ. ಬರೀ ವಿಷಯ ಮುಗಿಸಬೇಕೆಂಬ ಶಾಸ್ತ್ರದ ಬೋಧನೆಯಾಗಿ ಮಾರ್ಪಡುತ್ತದೆ. ಇಂತಹ ವಿದ್ಯಾರ್ಥಿ ವಿರೋಧಿ ಪದ್ಧತಿಯನ್ನು ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದರು.
ರಾಜ್ಯದಲ್ಲಿ ಒಟ್ಟು 1472 ಕ್ಕಿಂತ ಹೆಚ್ಚು ಕಾಲೇಜುಗಳಿದ್ದು, ಪ್ರತಿ ವರ್ಷ ಸುಮಾರು 30 ಸಾವಿರ ವಿದ್ಯಾರ್ಥಿಗಳು ತರಬೇತಿ ಪಡೆದು ಹೊರಬರುತ್ತಾರೆ. ಆದರೆ ಈ ಸೆಮಿಸ್ಟರ್ ಪದ್ಧತಿ ಜಾರಿಗೊಳಿಸಿರುವುದರಿಂದ ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ತರಬೇತಿ ಹೊಂದಿದವರೇ ಆಗಿರುತ್ತಾರೆ.
ಈಗ ಸೆಮಿಸ್ಟರ್ ಪದ್ಧತಿ ಜಾರಿಗೊಳಿಸಿರುವುದರಿಂದ ವಿದ್ಯಾರ್ಥಿಗಳು ಕೇವಲ ಅಂಕಗಳಿಸಿದ ತರಬೇತಿದಾರರಾಗುತ್ತಾರೆಯೇ ವಿನಃ ಉತ್ತಮ ತರಬೇತಿ ಪಡೆದವರಾಗಲಾರರು. ಸೆಮಿಸ್ಟರ್ ಪದ್ಧತಿಯನ್ನು ಕೈಬಿಟ್ಟು ಮುಂಚೆ ಇರುವಂತೆ ಮುಂದುವರೆಸಬೇಕು.
ಅಲ್ಲದೇ ನಿರುದ್ಯೋಗಿ ತರಬೇತಿದಾರರಿಗೆ ಉದ್ಯೋಗ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ. ಸಮಿತಿ ಅಧ್ಯಕ್ಷೆ ಗೌರಮ್ಮ ಸಿ.ಕೆ, ಸಂಚಾಲಕರಾದ ಜಮಾಲ ಸಾಬ್ ಮತ್ತಿತರರು ಇದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

