ಇಂದು ವಿವಿಧೆಡೆ ವಿದ್ಯುತ್ ಕಡಿತ
ಗುಲ್ಬರ್ಗ/ಶಹಾಬಾದ್: ಶಹಾಬಾದ್ ಎಂಯುಎಸ್ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿದ್ಯುತ್ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಡಿ.18ರಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ವಾಡಿ ಪಟ್ಟಣ ಸೇರಿದಂತೆ ಸಮೀಪದ ಹಲಕರ್ಟಿ, ಕಮರವಾಡಿ, ಸೂಲಹಳ್ಳಿ, ಇಂಗಳಗಿ, ಕುಂದನೂರು ಹಾಗೂ ಬಸವನ ಕಣಿ ಪ್ರದೇಶಗಳಲ್ಲಿ ಇಡೀ ದಿನ ವಿದ್ಯುತ್ ಕಡಿತಗೊಳ್ಳಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಶಹಾಬಾದ್ ಜೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಹಾಗೂ ವಾಡಿ ಜೆಸ್ಕಾಂ ಶಾಖಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೇವರ್ಗಿ ವರದಿ: ತಾಲೂಕಿನಲ್ಲಿ ಸೊಲ್ಲಾಪುರದಿಂದ- ರಾಯಚೂರುವರೆಗಿನ 765 ಕೆವಿ ಸಿಂಗಲ್ ಸರ್ಕ್ಯೂಟ್ ವಿದ್ಯುತ್ ಪ್ರಸರಣಾ ಮಾರ್ಗದ ನಿರ್ಮಾಣದ ಕೆಲಸ ನಡೆದಿರುವ ಪ್ರಯುಕ್ತ ಡಿ.18ರಂದು ಬೆ.8ರಿಂದ ಸಂಜೆ 6ರವರೆಗೆ ಜೇವರ್ಗಿ ತಾಲೂಕಿನಲ್ಲಿ ವಿದ್ಯುತ್ ಸರಬುರಾಜು ಇರುವುದಿಲ್ಲ. ಸಾರ್ವಜನಿಕರು ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿಯೊಂದಿಗೆ ಸಹಕರಿಸಬೇಕೆಂದು ಜೇವರ್ಗಿ ಉಪವಿಭಾಗದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
ವಿಚಾರ ಸಂಕಿರಣ
ಗುಲ್ಬರ್ಗ: ಗುಲ್ಬರ್ಗ ವಿಶ್ವವಿದ್ಯಾಲಯ, ಇತಿಹಾಸ ಅಧ್ಯಯನ ವಿಭಾಗ ಮತ್ತು ಸ್ವಾಮಿ ವಿವೇಕಾನಂದ 150ನೇ ಜನ್ಮ ವರ್ಷಾಚರಣೆ ಸಮಿತಿ ಗುಲ್ಬರ್ಗ ಇವರ ಸಹಯೋಗದೊಂದಿಗೆ ಡಿ.19 ರಂದು ಬೆ.10.30ಕ್ಕೆ ವಿಶ್ವವಿದ್ಯಾಲಯದ ಮಹಾತ್ಮಾಗಾಂಧಿ ಸಭಾಂಗಣದಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. ಭಾರತೀಯ ಇತಿಹಾಸ ಸಂಕಲನ ಯೋಜನೆಯ ಅಖಿಲ ಭಾರತೀಯ ಕಾರ್ಯದರ್ಶಿ ಡಾ. ಶರದ್ ಹೆಬ್ಬಾಳಕರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಕುಲಪತಿ ಪ್ರೊ. ಈ.ಟಿ. ಪುಟ್ಟಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.
ನಾಳೆ ತಾಪಂ ಸಭೆ
ಚಿತ್ತಾಪುರ: ತಾಲೂಕಿನ ಎಲ್ಲ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸಭೆ ಡಿ.19ರಂದು ಬೆ.10.30ಕ್ಕೆ ತಾಪಂ ಆವರಣದಲ್ಲಿ ನಡೆಯಲಿದೆ ಎಂದು ತೆಂಗಳಿ ಗ್ರಾಪಂ ಅಧ್ಯಕ್ಷ ಮಲ್ಲಪ್ಪ ಹೊಸ್ಮನಿ ಇಂಗನಕಲ್ ತಿಳಿಸಿದ್ದಾರೆ.
ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರ ಒಕ್ಕೂಟ ರಚನೆ ಮಾಡಲು ಸಭೆಯಲ್ಲಿ ಚರ್ಚಿಸಲಾಗುವುದು. ಸಭೆಗೆ ಭಾಗವಹಿಸಿ ಸಲಹೆ ಸೂಚನೆ ನೀಡಬೇಕೆಂದು ಅವರು ಕೋರಿದ್ದಾರೆ.
ಕಾಂಗ್ರೆಸ್ಗೆ ನೇಮಕ
ಅಫಜಲ್ಪುರ: ಪಟ್ಟಣದಲ್ಲಿ ಯುತ್ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ಚುನಾವಣೆಯಲ್ಲಿ ಪಟ್ಟಣದ ಬೂತ್ ನಂ.10ಕ್ಕೆ ವಿಶ್ವನಾಥ ಕಾಶೆ ಅಧ್ಯಕ್ಷರಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ಮಿರ್ಜಾ ಸಲೀಂ ಬೇಗ್ ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

