ಗುಲ್ಬರ್ಗಾ

ನಿಗದಿತ ಅವಧಿಯಲ್ಲಿ ಕಾಮಗಾರಿ ಕೈಗೊಳ್ಳದಿದ್ರೆ ಕ್ರಮ: ಇಒ

Published On :

ಆಳಂದ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಅನುದಾನಗಳಲ್ಲಿ ನೇರವಾಗಿ ಗ್ರಾಪಂಗಳಿಗೆ ಅನುದಾನ ಬರುತ್ತಿದ್ದು, ನಿಗದಿತ ಅವಧಿಯೊಳಗೆ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ನಿರ್ಲಕ್ಷಿಸಿದಲ್ಲಿ ಮೇಲಧಿಕಾರಿಗಳಿಗೆ ದೂರಬೇಕಾಗುತ್ತದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ ಶೃಂಗೇರಿ ಅಧಿಕಾರಿಗಳಿಗೆ ಎಚ್ಚರಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಗ್ರಾಪಂ ವ್ಯಾಪ್ತಿಯ ಹಲವು ಕಾಮಗಾರಿ ಪ್ರಗತಿ ಪರಿಶೀಲನೆಯಲ್ಲಿ ಮಾತನಾಡಿ, ಗ್ರಾಪಂ.ಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಆಸಕ್ತಿಯಿಂದ ಕಾರ್ಯನಿರ್ವಹಿಸಿ ಅನುದಾನಗಳ ಸದುಪಯೋಗ ಪಡಿಸಿಕೊಳ್ಳಬೇಕು. ಪಿಡಿಒ ಮತ್ತು ಕಾರ್ಯದರ್ಶಿ ಕ್ರಿಯಾಯೋಜನೆಯಂತೆ ಕಾಮಗಾರಿ ಕೈಗೊಂಡಾಗ ಇನ್ನುಳಿದ ಕಾಮಗಾರಿಗಳಿಗೆ ಹೆಚ್ಚಿನ ಹಣದ ಬೇಡಿಕೆಯನ್ನು ಸಲ್ಲಿಸಲು ಸಾಧ್ಯವಾಗುತ್ತದೆ ಎಂದರು.
ವಿವಿಧ ಗ್ರಾಪಂಗಳ ಅಧಿಕಾರಿಗಳಿಂದ ಉದ್ಯೋಗ ಖಾತ್ರಿ, ಮಾಹಿತಿ ಶಿಕ್ಷಣ ಸಂವಹನ, ಕೂಲಿ ಬೇಡಿಕೆ ಸೃಷ್ಟಿಸುವುದು. ವೈಯಕ್ತಿಕ ಕಾಮಗಾರಿ ಆರಂಭಿಸುವುದು, ಕಾಯಕ ಸಂಘ ಕ್ರೀಯಾಶೀಲ ಮಾಡಿ ಅವರಿಗೂ ತಿಳಿವಳಿಕೆ, ತರಬೇತಿ ನೀಡುವುದು, ಶೌಚಾಲಯ ನಿರ್ಮಾಣ ಸೇರಿದಂತೆ ವಿವಿಧ ಯೋಜನೆಗಳ ಗ್ರಾಪಂವಾರು ಪ್ರಗತಿ ಪರಿಶೀಲಿಸಿದರು.
ಯೋಜನಾಧಿಕಾರಿ ಗುರುನಾಥ ಗೌಡಪ್ಪನವರ, ಪ್ರಭಾರಿ ಅಧಿಕಾರಿ ರಾಮರಾವ ಕುಲಕರ್ಣಿ, ವ್ಯವಸ್ಥಾಪಕ  ಬಸವರಾಜ ಪಾಟೀಲ್, ಸಂಯೋಜಕ ಸಿದ್ದಾರಾಮ ಕೇರೂರ ಇತರರು ಪಾಲ್ಗೊಂಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.