ಮೃತ ರೈತ ರಾಠೋಡ ಕುಟುಂಬಕ್ಕೆ ಅನಿತಾ ಸಾಂತ್ವನ
ಗುಲ್ಬರ್ಗ: ತಾಲೂಕಿನ ಪಾಣೇಗಾಂವ ಗ್ರಾಮದ ರೈತ ಸಂಜುಕುಮಾರ ಲಕ್ಷ್ಮಣ ರಾಠೋಡ ಇತ್ತೀಚೆಗೆ ಸಾಲದ ಬಾಧೆ ತಾಳಲಾರದೆ ತನ್ನ ಹೊಲದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಜಿಪಂ ಉಪಾಧ್ಯಕ್ಷೆ ಅನಿತಾ ಪವನಕುಮಾರ್ ವಳಕೇರಿ ಮತ್ತು ಸಹಾಯಕ ಕೃಷಿ ನಿರ್ದೇಶಕ ಮತ್ತ ಖಣದಾಳ ಗ್ರಾಪಂ ಅಧ್ಯಕ್ಷ ಶಿವಶರಣಪ್ಪ ಚಿನಮಳ್ಳಿ ಅವರು ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಉಪಾಧ್ಯಕ್ಷರು ಸರ್ಕಾರದಿಂದ ಪರಿಹಾರ ಒದಗಿಸಿಕೊಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಬ್ಯಾಂಕಿನ ಸಾಲ ಮನ್ನಾ ಮಾಡಲು ಸರ್ಕಾರಕ್ಕೆ ಒತ್ತಾಯಿಸುವುದಾಗಿ ಜಿಪಂ ಉಪಾಧ್ಯಕ್ಷ ಕುಟುಂಬದ ಸದಸ್ಯರಿಗೆ ಭರವಸೆ ನೀಡಿದರು.
ಮೃತ ಕುಟುಂಬಕ್ಕೆ ಪರಿಹಾರ ನೀಡಿಗುಲ್ಬರ್ಗ ತಾಲೂಕಿನ ಪಾಣೆಗಾಂವ ಗ್ರಾಮದ ಯುವ ರೈತ ಸಂಜೀವಕುಮಾರ್ ರಾಠೋಡ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ರೈತ- ಕೃಷಿ ಕಾರ್ಮಿಕರ ಸಂಘಟನೆಯ ಜಿಲ್ಲಾ ಸಹ ಸಂಚಾಲಕ ಗೌಸ್ ಪಟೇಲ್ ಒತ್ತಾಯಿಸಿದ್ದಾರೆ.
ರೈತನ ಆತ್ಮಹತ್ಯೆ ಜರುಗಿ 3 ದಿವಸಗಳಾದರೂ ಕುಟುಂಬದ ಸದಸ್ಯರಲ್ಲಿ ಮಡುಗಟ್ಟಿದ ದುಃಖದ ಆಕ್ರಂದನ ಇನ್ನು ನಿಂತಿಲ್ಲ. ಈ ಸಂದರ್ಭದಲ್ಲಿ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಧನ ಒದಗಿಸುವ ಭರವಸೆ ಕೊಟ್ಟಿರುವುದಂತೂ ನಿಜ. ಆದರೆ, ಹೋದ ಜೀವ ಮರಳಿ ಬರುವುದಿಲ್ಲ. ಆದ್ದರಿಂದ ಸರ್ಕಾರ ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ರೈತರಿಗೆ ಬೀಜ, ರಸಗೊಬ್ಬರ, ಕೀಟನಾಶಕವನ್ನು ಸಬ್ಸಿಡಿ ದರದಲ್ಲಿ ಒದಗಿಸಬೇಕು ಮತ್ತು ಅವರು ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ರೈತ ಬಾಂಧವರು ಆತ್ಮಹತ್ಯೆಗೆ ಮೊರೆ ಹೋಗಬಾರದು ಎಂದು ಗೌಸ್ ಪಟೇಲ್ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

