ರಟಕಲ್; ಬದು ನಿರ್ಮಾಣ ಕಾಮಗಾರಿಗೆ ಚಾಲನೆ
ಕ.ಪ್ರ. ವಾರ್ತೆ ಚಿಂಚೋಳಿ ಡಿ.18
ಗ್ರಾಮೀಣ ಪ್ರದೇಶದ ಕೂಲಿಕಾರರು ಉದ್ಯೋಗಕ್ಕಾಗಿ ನಗರ ಪ್ರದೇಶಕ್ಕೆ ವಲಸೆ ಹೋಗದಂತೆ ತಡೆಯಲು ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತಂದಿದೆ. ಕೂಲಿ ಕಾರ್ಮಿಕರು ಯೋಜನೆಯ ಸದುಪಯೋಗಪಡೆದುಕೊಳ್ಳಬೇಕೆಂದು ತಹಸೀಲ್ದಾರ್ ಮೋಹನ ಜೋಶಿ ಹೇಳಿದರು.
ತಾಲೂಕಿನ ರಟಕಲ್ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕೂಲಿ ಕಾರ್ಮಿಕರು ತಮ್ಮ ಗ್ರಾಮದಲ್ಲಿಯೇ ಇದ್ದುಕೊಂಡು ಕೆಲಸವನ್ನು ಮಾಡಲು ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ. ನಗರ ಪ್ರದೇಶಕ್ಕೆ ವಲಸೆ ಹೋಗದೆ ಹಳ್ಳಿಯಲ್ಲಿ ಜೀವನ ನಡೆಸಬೇಕು. ಉದ್ಯೋಗ ಖಾತ್ರಿಯಲ್ಲಿ ಪ್ರತಿ ದಿನಕ್ಕೆ ಗಂಡು, ಹೆಣ್ಣು ಕೂಲಿ 174 ನೀಡಲಾಗುತ್ತಿದೆ, ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜಗದೇವ ಬೈಗೊಂಡ ಮಾತನಾಡಿ, ತಾಲೂಕಿನ 32 ಗ್ರಾಮ ಪಂಚಾಯತದಲ್ಲಿ ಪ್ರಸಕ್ತ ಸಾಲಿನಲ್ಲಿ ಜಿಪಂ, ಜಲಾನಯನ ಅಭಿವೃದ್ಧಿ, ಸಣ್ಣ ನೀರಾವರಿ, ಸಾಮಾಜಿಕ ಅರಣ್ಯ, ಪ್ರಾದೇಶಿಕ ಅರಣ್ಯ, ತೋಟಗಾರಿಕೆ, ಕೃಷಿ, ರೇಷ್ಮೆ, ಪಶು ಸಂಗೋಪನೆ, ಮೀನುಗಾರಿಕೆ ಮುಂತಾದ ಇಲಾಖೆಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಒಟ್ಟು 1756 ಕಾಮಗಾರಿಗಳಿದ್ದು, ಒಟ್ಟು 1775.92 ಕೋಟಿ ಖರ್ಚು ಮಾಡಲಾಗುತ್ತಿದೆ ಎಂದರು.
ಗ್ರೇಡ್-1 ತಹಸೀಲ್ದಾರ್ ಜಗನ್ನಾಥರೆಡ್ಡಿ, ಸಿಪಿಐ ಮುಖಂಡ ಶರಣಬಸಪ್ಪ ಮಮಶೆಟ್ಟಿ, ಗ್ರಾಪಂ ಅಧ್ಯಕ್ಷ ಚಂದ್ರಶೇಖರ ಚೌಕಾ, ಪಿಡಿಒ ಶ್ರೀಶೈಲ್ ಮಂಠಾಳೆ ಹಾಗೂ ಕೂಲಿಕಾರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

