ಹುಣಸಗಿ ಮೊರಾರ್ಜಿ ಶಾಲೆಗೆ ಪ್ರಶಸ್ತಿ
ಹುಣಸಗಿ: ಇತ್ತೀಚಿಗೆ ಮಾಳನೂರಿನಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಹುಣಸಗಿಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನದ ಮೂಲಕ ಸಮಸ್ತ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ.
ಪ್ರಾಥಮಿಕ ಶಾಲಾ ವಿಭಾಗ: ಯೋಗಾಸನ, ಕಂಠಪಾಠ (ಇಂಗ್ಲೀಷ್), ಕಥೆ ಹೇಳುವುದು ಇವುಗಳಲ್ಲಿ ಪ್ರಥಮ ಸ್ಥಾನ ಗಳಿಸಿದೆ. ಧಾರ್ಮಿಕ ಪಠಣ, ಕ್ಲೇ ಮಾಡಲಿಂಗ್, ಲಘು ಸಂಗೀತ, ಚಿತ್ರಕಲೆ, ರಸಪ್ರಶ್ನೆಗಳಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಪ್ರೌಢಶಾಲಾ ವಿಭಾಗ: ಕಥೆ ಹೇಳುವುದು, ಇಂಗ್ಲೀಷ್ ಭಾಷಣ, ವಿಜ್ಞಾನ ಮಾದರಿ, ಕ್ಲೇ ಮಾಡೆಲಿಂಗ್ಗಳಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಕಂಠಪಾಠ, ಪ್ರಬಂಧ, ಹಿಂದಿ ಭಾಷಣ, ಇಂಗ್ಲೀಷ್ ಕಂಠಪಾಠ, ಧಾರ್ಮಿಕ ಪಠಣ, ರಂಗೋಲಿ ಸ್ಪರ್ಧೆ, ಕನ್ನಡ ಭಾಷಣ, ಜಾನಪದ ಗೀತೆ, ಆಶುಭಾಷಣ, ಚಿತ್ರಕಲೆಗಳಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಸಾಮೂಹಿಕ ವಿಭಾಗ: ಜಾನಪದ ನೃತ್ಯ, ದೇಶಭಕ್ತಿ ಗೀತೆ, ರಸಪ್ರಶ್ನೆಗಳಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಪ್ರಭಾರಿ ಪ್ರಾಚಾರ್ಯ ಬಸವರಾಜ ಎಸ್. ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

