ಜಿಲ್ಲಾ ಎಸ್ಟಿ ಮೋರ್ಚಾ ಕಾರ್ಯಕಾರಿಣಿ
ಯಾದಗಿರಿ: ಬಿಜೆಪಿ ಸಾಧನೆಗಳನ್ನು ಸಾಮಾನ್ಯ ಜನತೆಗೆ ತಲುಪಿಸುವ ಮೂಲಕ ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಬಿಜೆಪಿ ರಾಜ್ಯ ಎಸ್ಟಿ ಮೋರ್ಚಾ ಅಧ್ಯಕ್ಷ ಸೋಮಲಿಂಗಪ್ಪ ಹೇಳಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಎಸ್ಟಿ ಮೋರ್ಚಾ ಏರ್ಪಡಿಸಿದ್ದ ಪ್ರಥಮ ಕಾರ್ಯಕಾರಿಣಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಸಂಘಟನೆ ಮಾಡುವ ಅವಶ್ಯಕತೆ ಇದೆ.
ಕೇಂದ್ರದಲ್ಲಿನ ಕಾಂಗ್ರೆಸ್ ನೇತೃತ್ವದ ಸರ್ಕಾರದ ಆಡಳಿತ ವೈಖರಿ ಜನವಿರೋಧಿಯಾಗಿದ್ದು, ರಾಷ್ಟ್ರದ ಮುಂದೆ ಭಾರತ ತಲೆತಗ್ಗಿಸುವಂತಾಗಿದೆ. ದೇಶದ ಸೈನಿಕ ಗಡಿಯಲ್ಲಿ ಶತ್ರು ರಾಷ್ಟ್ರಗಳ ಗುಂಡೇಟಿಗೆ ಪ್ರಾಣ ಕಳೆದುಕೊಂಡರೂ ಕೇಂದ್ರ ಸರ್ಕಾರ ಮಾತ್ರ ಮೌನಕ್ಕೆ ಶರಣಾಗಿರುವುದು ದುರಂತದ ಸಂಗತಿ ಎಂದು ಹೇಳಿದರು.
ಎಸ್ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ನಾರಾಯಣರಾವ್ ರಾಂಪುರೆ ಮಾತನಾಡಿ, ಬೇರೆ ಪಕ್ಷಗಳಿಗಿಂತ ಬಿಜೆಪಿ ಭಿನ್ನವಾದ ಪಕ್ಷ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಕಾರ್ಯಕರ್ತರಿಗೆ ಇದು ಯುದ್ಧದ ಸಮಯವಿದ್ದಂತೆ.
ಕಾರ್ಯಕರ್ತರು ಹಗಲಿರುಳು ಪಕ್ಷದ ಗೆಲವಿಗಾಗಿ ಶ್ರಮಿಸಬೇಕು. ಸಾಮಾನ್ಯ ಕಾರ್ಯಕರ್ತರು ಉನ್ನತ ಸ್ಥಾನಕ್ಕೆ ತಲುಪಬಲ್ಲ ಎಂಬುದನ್ನು ಮೋದಿಯವರನ್ನು ನೋಡಿ ನಾವೆಲ್ಲ ತಿಳಿದುಕೊಳ್ಳಬೇಕಿದೆ ಎಂದು ಹೇಳಿದರು.
ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಂದರರಾಜ, ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷ ಅಮರೇಶ ನಾಯಕ, ಮುಖಂಡರಾದ ಯಲ್ಲಯ್ಯ ನಾಯಕ ವನದುರ್ಗ, ಭೋಜಪ್ಪ ಮಗ್ಗಾ, ಲಗಮಣ್ಣ ಮುಂಡರಗಿ, ಬಸವರಾಜಪ್ಪ ವಡಿಗೇರಾ, ತ್ರಿಶೂಲ ಹವಾಲ್ದಾರ, ಫಕೀರಪ್ಪ, ಭೀಮರಾಯ ನಾಯಕ, ನಗರಾಧ್ಯಕ್ಷ ಹಣಮಂತ ಇಟಗಿ ಸೇರಿದಂತೆ ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

