ಗುಲ್ಬರ್ಗಾ

ತರಕಾರಿ ಮಾರ್ಕೆಟ್ ನಿರ್ಮಾಣಕ್ಕೆ ಮನವಿ

Published On :

ಕ.ಪ್ರ. ವಾರ್ತೆ  ಜೇವರ್ಗಿ  ಡಿ.19
ಜೇವರ್ಗಿ ಪಟ್ಟಣದ ಹಳೆ ಬಸ್‌ನಿಲ್ದಾಣದ ಸ್ಥಳದಲ್ಲಿ ಹಣ್ಣು ತರಕಾರಿ ಮಾರುಕಟ್ಟೆ ನಿರ್ಮಿಸುವಂತೆ ಆಗ್ರಹಿಸಿ ಹಣ್ಣು ಮತ್ತು ತರಕಾರಿ ವರ್ತಕರ ಸಂಘದ ವತಿಯಿಂದ ಸೋಮವಾರ ತಾಪಂ ಅಧ್ಯಕ್ಷರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪಟ್ಟಣದಲ್ಲಿ ಸುಮಾರು ವರ್ಷಗಳಿಂದ ಅನೇಕ ಬಡ ವರ್ತಕರು ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದಾರೆ. ಬೀದರ್ ಶ್ರೀರಂಗ ಪಟ್ಟಣ ರಾಜ್ಯ ಹೆದ್ದಾರಿ ಬದಿಗೆ ವರ್ತಕರು ವ್ಯಾಪಾರ ಮಾಡುತ್ತಿದ್ದಾರೆ. ಪ್ರಸಕ್ತ ದಿನಗಳಲ್ಲಿ ಹೆದ್ದಾರಿಯಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ತರಕಾರಿ ವ್ಯಾಪಾರಿಗಳ ಕೈಯಲ್ಲಿ ಜೀವ ಹಿಡಿದು ವ್ಯಾಪಾರ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣ ಮಾರುಕಟ್ಟೆ ನಿರ್ಮಿಸುವರ ಮೂಲಕ ವರ್ತಕರಿಗೆ ದೈನಂದಿನ ಬದುಕಿಗೆ ಅನುಕೂಲ ಕಲ್ಪಿಸಬೇಕೆಂದು ಹಣ್ಣು ಮತ್ತು ತರಕಾರಿ ವರ್ತಕರ ಸಂಘದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಗಿರಣಿ ಮನವಿ ಪತ್ರದ ಮೂಲಕ ಒತ್ತಾಯಿಸಿದರು.
ವ್ಯಾಪಾರಿಗಳು ತಾಪಂ ಅಧ್ಯಕ್ಷ ಮಲ್ಲಣ್ಣಗೌಡ ಪಾಟೀಲ್ ನೇದಲಗಿ, ತಾಪಂ ಇಒ ಪಲ್ಲಾನರಸಿಂಹ ರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಜ್ಜು ಲಕ್ಪತಿ, ಅಬ್ದುಲ್ ಮಾಜೀದ್ ಗಿರಣಿ, ರಹೀಮಶೆಟ್ ಭಾಗವಾನ, ಯುನುಸ್ ಹಾರ್ಡವೇರ್, ಸೈಫಾನ್‌ಅಲಿ ಜೇರಟಗಿ, ತಾಪಂ ಸದಸ್ಯ ಮಲ್ಲಿಕಾರ್ಜುನ ಕೆಲ್ಲೂರ, ಶರಣಗೌಡ ಹರನೂರ, ಶಾಂತಗೌಡ ಮಳ್ಳಿ, ಶಿವಪುತ್ರಪ್ಪ ಕೋರಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.