ಗುಲ್ಬರ್ಗಾ

ತೊಗರಿ ಬೆಂಬಲ ಬೆಲೆಗೆ ಒತ್ತಾಯ

Published On :

ಕ.ಪ್ರ. ವಾರ್ತೆ  ಚಿಂಚೋಳಿ  ಡಿ.19
 ತಾಲೂಕಿನ ರಟಕಲ್ ಗ್ರಾಮದಲ್ಲಿ ತೊಗರಿಗೆ ಬೆಂಬಲ ಬೆಲೆ ನೀಡಿ ಖರೀದಿಸುವಂತೆ ಒತ್ತಾಯಿಸಿ ರಟಕಲ್ ತೊಗರಿ ಬೆಳೆಯುವ ರೈತರ ಹೋರಾಟ ಸಮಿತಿ ವತಿಯಿಂದ ಗುಲ್ಬರ್ಗ- ಚಿಂಚೋಳಿ ರಾಜ್ಯಹೆದ್ದಾರಿ ಮೇಲೆ ರಸ್ತೆ ತಡೆ ನಡೆಸಿ ತಹಸೀಲ್ದಾರ್ ಮುಖಾಂತರ ಮುಖ್ಯಮಂತ್ರಿ ಸಿದ್ರಾಮಯ್ಯಗೆ ಮನವಿ ಪತ್ರ ಸಲ್ಲಿಸಲಾಯಿತು.
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, ರೈತ ಆಯೋಗದ ಅಧ್ಯಕ್ಷ ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ವರದಿಯಂತೆ ತೊಗರಿಯನ್ನು 6450 ರಂತೆ ರೈತರಿಂದ ಖರೀದಿಸಬೇಕೆಂದು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆದರೂ ಸರ್ಕಾರ ರೈತರ ತೊಗರಿಗೆ ಬೆಂಬಲ ಬೆಲೆ ಘೋಷಿಸಿಲ್ಲ. ರೈತರು ತೊಗರಿ ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ. ಜಿಲ್ಲಾ ತೊಗರಿ ಮಂಡಳಿಗೆ 100 ಕೋಟಿ ರೂಪಾಯಿ ಬಿಡುಗಡೆಗೊಳಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಚಂದ್ರಕಾಂತ ಬೈರಪ್ಪಾ, ಬಸವರಾಜ ಚೌಕಾ, ಮುರುಗಯ್ಯ ಪುರಾಣಿಕ, ಕಲ್ಯಾಣರಾವ ತಳಕೇರಿ, ತಿಪ್ಪಣ್ಣ ಆರಿ, ಹಮೀದಮಿಯ್ಯ ಸುಲೇಗಾಂವ, ಚಂದ್ರಶೇಖರ ಚೌಕಾ ಗ್ರಾಪಂ ಅಧ್ಯಕ್ಷರು, ಏಕಯ್ಯ ಸ್ವಾಮಿ ಬುಕಟಿ, ವೈಜನಾಥ, ಯೋಗೇಶ ಜಾಕೀರಾ ಬೇಲೂರ ಮಲ್ಲಮ್ಮ ರಮಕಬಾಯಿ ಸೇರಿದಂತೆ ಭಾಗವಹಿಸಿದರು. ಉಪ ತಹಸೀಲ್ದಾರ್ ಬಿ.ಜಿ. ಕುದರಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ರಟಕಲ್ ಪೋಲಿಸರು ಸೂಕ್ತ ಬಂದೋಬಸ್ತ್ ವ್ಯವಸ್ಥೆಗೊಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.