ಗುಲ್ಬರ್ಗಾ

ಮಕ್ಕಳ ಭವಿಷ್ಯ ಟಿವಿ, ಮೊಬೈಲ್‌ಗೆ ಬಲಿ: ಜೋಶಿ

Published On :

ಸೇಡಂ: ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ, ಬೆಳವಣಿಗೆಯ ಹಂತದಲ್ಲಿರುವ ಮಕ್ಕಳಿಗೆ ಟಿವಿ ಮತ್ತು ಮೊಬೈಲ್ ಕೊಟ್ಟು ಹಾಳುಗೆಡವದಿರಿ ಎಂದು ಆರೋಗ್ಯ ಇಲಾಖೆಯ ವಿನಾಯಕ ಜೋಶಿ ಪಾಲಕರಿಗೆ ಕಿವಿ ಮಾತು ಹೇಳಿದರು. ಪಟ್ಟಣದ ವಿಶ್ವಧಾಮ ಶಾಲೆಯಲ್ಲಿ ವಿಶ್ವಧಾಮ ಎಜುಕೇಶನಲ್ ಮತ್ತು ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ ಮಕ್ಕಳ ಪ್ರಗತಿಗೆ ಪೂರಕ ಆರೋಗ್ಯ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. ಮಕ್ಕಳಿಗೆ ಶಿಕ್ಷಕರು ಮತ್ತು ಪಾಲಕರು ಜಂಟಿಯಾಗಿ ಒಳ್ಳೆಯ ಸಂಸ್ಕಾರ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಆಧುನೀಕರಣದಿಂದ ಮಕ್ಕಳ ಅಭ್ಯಾಸ ಹಾಳಾಗುತ್ತಿದ್ದು, ಅದನ್ನು ತಡೆಯುವ ನಿಟ್ಟಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು. ಟ್ರಸ್ಟ್‌ನ ಸಿದ್ಧರಾಮ ಮಾತನಾಡಿದರು. ಮಂಜುಳಾ ಎಂ. ಪಾಟೀಲ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಮುಖ್ಯಗುರು ಸುರೇಶ ಕುಲಕರ್ಣಿ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿ ರಾಣಿ ರಾಠೋಡ ನಿರೂಪಿಸಿದರು. ಮಹಾದೇವ ಜೈನ್ ಸ್ವಾಗತಿಸಿದರು. ಇಂದು ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.