ಗುಲ್ಬರ್ಗಾ

ಶಿಕ್ಷಣ ಅಭಿವೃದ್ಧಿಗೆ ಪಾಟೀಲರ ಕೊಡುಗೆ ಅಪಾರ: ಶಾಸಕ ಡಾ. ಉಮೇಶ ಜಾಧವ

Published On :

ಚಿಂಚೋಳಿ: ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರು ಹಿಂದುಳಿದ ಪ್ರದೇಶದಲ್ಲಿ ಶೈಕ್ಷಣಿಕ ಅಭಿವೃದ್ಧಿಗಾಗಿ ಸಲ್ಲಿಸಿದ ಅವರ ಕೊಡುಗೆ ಅಪಾರ ಎಂದು ಶಾಸಕ ಡಾ. ಉಮೇಶ ಜಾಧವ ಸ್ಮರಿಸಿದರು.
ಪಟ್ಟಣದ ವೀರೇಂದ್ರ ಪಾಟೀಲ್ ಟ್ರಸ್ಟ್ ಎಜುಕೇಶನ್ ಇನ್ಸಿಟ್ಯೂಶನ್ ಆಂಗ್ಲ ಮತ್ತು ಕನ್ನಡ ಮಾಧ್ಯಮದ 12ನೇ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವೀರೇಂದ್ರ ಪಾಟೀಲರು ರಾಜ್ಯದ 2ನೇ ಸಲ ಮುಖ್ಯಮಂತ್ರಿಯಾಗಿ ದಕ್ಷ ಮತ್ತು ಪ್ರಾಮಾಣಿಕತನದಿಂದ ಸೇವೆ ಸಲ್ಲಿಸಿದ್ದಾರೆ. ಚಿಂಚೋಳಿಯಲ್ಲಿ ಸಿ.ಬಿ. ಪಾಟೀಲ್ ಪದವಿ ಮಹಾವಿದ್ಯಾಲಯ ಕಾಲೇಜು ಪ್ರಾರಂಭಿಸಿ ಇಲ್ಲಿನ ಅನೇಕ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಕೊಡಿಸಿದ್ದಾರೆ. ಅವರ ಹೆಸರಿನಲ್ಲಿ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗೆ ಬೇಕಾಗುವ ಎಲ್ಲ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ರಾಜ್ಯದ ಬಾರ್ ಕೌನ್ಸಿಲ್ ಉಪಾಧ್ಯಕ್ಷ ಕಾಶಿನಾಥ ಮೋತಕಪಳ್ಳಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಗುರಿಯನ್ನಿಟ್ಟುಕೊಳ್ಳಬೇಕು, ಶಿಕ್ಷಕರು ನೀಡುವ ಶಿಕ್ಷಣದಲ್ಲಿ ನೈತಿಕತೆ ಇರಬೇಕು. ಇದರಿಂದಾಗಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ವೃದ್ಧಿಸಿಕೊಳ್ಳಲು ಸಾಧ್ಯ ಎಂದರು.
ವೀರೇಂದ್ರ ಪಾಟೀಲ್ ಶಿಕ್ಷಣ ಸಂಸ್ಥೆ ಅಧ್ಯಕ್ಷರು ಹಾಗೂ ಮಾಜಿ ಶಾಸಕ ಕೈಲಾಸನಾಥ ಪಾಟೀಲ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದು, ಶಾಲಾ ಕೋಣೆಗಳ  ಅವಶ್ಯಕತೆಯಿದೆ. ಶಾಸಕರು ತಮ್ಮ ಅನುದಾನದಿಂದ ಶಾಲೆಕೋಣೆ ನಿರ್ಮಾಣಕ್ಕಾಗಿ ಅನುದಾನ ನೀಡಬೇಕೆಂದು ಮನವಿ ಮಾಡಿದರು.
ಉದ್ಯಮಿ ನಾಗಯ್ಯ ಕೋಟ್ರಕಿ, ನಿವೃತ್ತ ಬಿಎಒ ಶಿವಶಂಕರಯ್ಯ ಸ್ವಾಮಿ ಕುಪನೂರ, ಮುಖ್ಯಗುರು ಶಾಂತಕುಮಾರ್ ಕುಲಕರ್ಣಿ, ಶಿವಪುತ್ರಪ್ಪ ಸೀಳಿನ್, ಗುಂಡೇರಾವ ಮಲಿ, ಪಪಂ ಅಧ್ಯಕ್ಷೆ ಇಂದುಮತಿ ಸ್ವಾಮಿ ಮುಂತಾದವರು ಭಾಗವಹಿಸಿದ್ದರು.
ಸಂಸ್ಥೆಯ ಉಪಾಧ್ಯಕ್ಷ ಬಸವರಾಜ ಮಲಿ ಸ್ವಾಗತಿಸಿದರು. ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.