ಗುಲ್ಬರ್ಗಾ

ಪಠ್ಯದ ಜತೆ ಪ್ರತಿಭೆಗಳನ್ನು ಗುರ್ತಿಸಿ

Published On :

ಸುರಪುರ: ಶಿಕ್ಷಕರು ಮಕ್ಕಳಿಗೆ ಪಠ್ಯದ ಚಟುವಟಿಕೆಗಳೊಂದಿಗೆ ಅವರಲ್ಲಿರುವ ಪ್ರತಿಭೆಗಳನ್ನು ಗುರ್ತಿಸಿ ಹೊರ ತರುವಂತಹ ಕೆಲಸ ಮಾಡಬೇಕು. ಶಿಕ್ಷಕರು ಮತ್ತು ಪೋಷಕರು ಸೂಕ್ತ ವೇದಿಕೆ ಒದಗಿಸುವ ಮೂಲಕ ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಕ್ಷೇತ್ರ ಶಿಕ್ಷಣಾಕಾರಿ ಎ.ವಿ. ಕೆಂಪರಂಗಯ್ಯ ಸಲಹೆ ನೀಡಿದರು.
ಇಲ್ಲಿಯ ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲೆಗಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಅಧ್ಯಕ್ಷತೆ ವಹಿಸಿ, ವೈವಿಧ್ಯಮಯ ಸಾಂಸ್ಕೃತಿಕ ಹಿನ್ನೆಲೆ ಹೊಂದಿರುವ ಈ ನಾಡಿನಲ್ಲಿ ಮುಂದಿನ ಪೀಳಿಗೆಗೂ ಸಾಂಸ್ಕೃತಿಕ, ಶೈಕ್ಷಣಿಕ, ಕಲೆಯನ್ನು ಕೊಂಡೊಯ್ಯುವಂತಾಗಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಲಿ ಎಂದರು.
ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಭೀಮಣ್ಣ ಬೋಸ್ಗಿ ಮಾತನಾಡಿ, ಈಗ ಪ್ರತಿಭಾ ಕಾರಂಜಿಯಂತಹ ಸ್ಪರ್ಧೆ ನಡೆಯುತ್ತಿರುವುದು ಸಂತೋಷದ ವಿಚಾರ. ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ, ಸೂಕ್ತ ಅವಕಾಶ ಒದಗಿಸದಿದ್ದಲ್ಲಿ ಪ್ರತಿಭೆಯೇ ಕಮರಿ ಹೋಗುವ ಸಾಧ್ಯತೆ ಇರುತ್ತದೆ. ಎಲ್ಲರೂ ಪ್ರತಿಭಾ ಅನಾವರಣಕ್ಕೆ ಕಾರಣೀಭೂತರಾಗಬೇಕು ಎಂದು ಕರೆ ನೀಡಿದರು.
ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ 28 ಕ್ಲಸ್ಟರಿನ 300ಕ್ಕೂ ಹೆಚ್ಚು ಮಕ್ಕಳು ನಾನಾ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಜಾನಪದ ನೃತ್ಯ, ಕೋಲಾಟ, ನಾಟಕ, ಛದ್ಮವೇಶ, ಚಿತ್ರಕಲೆ, ರಸ ಪ್ರಶ್ನೆ, ಚರ್ಚಾ ಸ್ಪರ್ಧೆ, ಕ್ಲೇ ಮಾಡಲಿಂಗ್, ದೇಶ ಭಕ್ತಿಗೀತೆ, ಗ್ರಂಥ ಪಠಣ, ಯೋಗಾಸನ, ಕಥೆ ಸೇರಿದಂತೆ 15ಕ್ಕೂ ಹೆಚ್ಚು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅಕ್ಕು ಬಾಯಿ, ಶರಣಬಸವ, ಈರಣ್ಣ ಉಕ್ಕಲಿ, ಹಣಮಂತ್ರಾಯ, ಶಿವಾನಂದ, ರಾಮಣ್ಣ ಗುಂಜಾಳ, ಈಶ್ವರ ದೇವರಗೋನಾಲ ಶಿಕ್ಷಕರು ನಿರ್ಣಾಯಕರಾಗಿ ಕಾರ್ಯ ನಿರ್ವಹಿಸಿದರು. ಪುರಸಭೆ ಅಧ್ಯಕ್ಷ ದೇವಿಂದ್ರಪ್ಪ ಕಳ್ಳಿಮನಿ ಕಾರ್ಯಕ್ರಮ ಉದ್ಘಾಟಿಸಿದರು. ತಾಪಂ ಅಧ್ಯಕ್ಷ ಶ್ರೀನಿವಾಸಗೌಡ ಪಾಟೀಲ್, ರಾಜಾ ರೂಪಕುಮಾರ ನಾಯಕ, ಹಳ್ಳೆಪ್ಪ ಕಾಂಜಾಂಜಿ, ಪಡಿಯಣ್ಣ ಬೆಳ್ಳುಬ್ಬಿ ಇದ್ದರು. ಶರಣಬಸವ ಸ್ವಾಗತಿಸಿದರು. ಅಬ್ದುಲ್  ಪಟೇಲ್ ನಿರೂಪಿಸಿದರು. ನಾಗಪ್ಪ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.