ಪ್ರೋತ್ಸಾಹ ಧನಕ್ಕೆ ಆಗ್ರಹ
ಯಾದಗಿರಿ: ಪ್ರತಿವರ್ಷ ಕೇರಳದ ಅಯ್ಯಪ್ಪ ದೇವಸ್ಥಾನಕ್ಕೆ ರಾಜ್ಯದಿಂದ ತೆರಳುವ ಲಕ್ಷಾಂತರ ಭಕ್ತರಿಗೆ ರಾಜ್ಯ ಸರ್ಕಾರ ತಲಾ 5 ಸಾವಿರ ಪ್ರೋತ್ಸಾಹ ಧನ ನೀಡಲು ಆಗ್ರಹಿಸಿ ಶ್ರೀರಾಮ ಸೇನಾ ತಾಲೂಕಾ ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಒತ್ತಾಯಿಸಿದರು. ದೇಶದ ರಾಜಕಾರಣಿಗಳು ನಮ್ಮದು ಜಾತ್ಯಾತೀತ ರಾಷ್ಟ್ರ ಎಂದು ಹೇಳುವ ಅವರು ಇಲ್ಲಿ ವಾಸಿಸುತ್ತಿರುವ ಮುಸ್ಲಿಂರಿಗೆ ಬೇರೆ ದೇಶದ ಹಜ್ಯಾತ್ರೆಗೆ ತೆರಳುವ ಪ್ರತಿಯೊಬ್ಬರಿಗೆ 42 ಸಾವಿರ ನೀಡುತ್ತಾರೆ. ಆದರೆ ಹಿಂದುಗಳ ಧಾರ್ಮಿಕ ಕ್ಷೇತ್ರ ಶಬರಿ ಮಲೆಗೆ ತೆರಳಲು ಪ್ರೋತ್ಸಾಹ ಹಣ ನೀಡುತ್ತಿಲ್ಲ. ಈ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಪ್ರತಿ ತಾಲೂಕ ಕೇಂದ್ರದಲ್ಲಿ ಅಯ್ಯಪ್ಪ ಭವನ ನಿರ್ಮಿಸಬೇಕೆಂದು ಒತ್ತಾಯಿಸಿದರು. ಸಿದ್ದಗೌಡ ಪಾಟೀಲ್, ರಘು,, ರವಿ, ಮುನ್ನಾಸಿಂಗ್, ಭೀಮಾಶಂಕರ್ ಇದ್ದರು.
ಎಸ್ಟಿಗೆ ಕೋಲಿ ಸಮಾಜ ಸೇರಿಸಿ
ಯಾದಗಿರಿ: ರಾಜ್ಯದಲ್ಲಿನ ಸುಮಾರು 50 ಲಕ್ಷ ಜನಸಂಖ್ಯೆಯಳ್ಳ ಟೋಕರೆ ಕೋಲಿ ಸಮಾಜದರ ಅಭಿವೃದ್ಧಿಗಾಗಿ ಎಸ್ಟಿ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಸರ್ಕಾರದಿಂದ ಅಂಬಿಗರ ಚೌಡಯ್ಯ ಜಯಂತಿಯಂದು ರಜೆ ಘೋಷಣೆ ಮಾಡಲು ಒತ್ತಾಯಿಸಿ ಜಿಲ್ಲಾ ಟೋಕರಿ ಸಮಾಜದಿಂದ ಸಿಎಂಗೆ ಮನವಿ ಸಲ್ಲಿಸಲಾಯಿತು. ಮೈಸೂರಿನ ಜ್ಞಾನ ಪ್ರಕಾಶ ಸ್ವಾಮೀಜಿ ನೇತೃತ್ವದಲ್ಲಿ ಯಾದಗಿರಿ ಜಿಲ್ಲಾ ಟೋಕರಿ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಮುದ್ನಾಳ ಮತ್ತಿತರರು ಸಿಎಂಗೆ ಮನವಿ ಸಲ್ಲಿಸಿ ತಮ್ಮ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿದರು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಅಂಬಿಗರ ಚೌಡಯ್ಯ ಜಯಂತಿ ಒಂದು ವಾರದಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. ಈ ವೇಳೆ ಶೋಭಾ ಬಾಣಿ ಜಿಪಂ ಸದಸ್ಯರು, ಶಿವಪುತ್ರಪ್ಪ ಕಣಿ, ಶಿವಕುಮಾರ ನಾಟೇಕಾರ, ನಾಂಗೇಂದ್ರಪ್ಪ, ರಾಜಶೇಖರ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

