ನಾಡಿನ ಪ್ರಗತಿಗೆ ಆಳ್ವಾಸ್ ಕೊಡುಗೆ ಅಪಾರ: ಸಜ್ಜನ
ಯಾದಗಿರಿ: ರಾಜ್ಯದಲ್ಲಿ ಶಿಕ್ಷಣ, ಕಲೆ, ಸಂಗೀತ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳ ಪ್ರಗತಿಗೆ ಶ್ರಮಿಸುವ ಮೂಲಕ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಕೊಡುಗೆ ಅಪಾರ ಎಂದು ಜಿಲ್ಲಾ ನುಡಿಸಿರಿ ಬಳಗದ ಅಧ್ಯಕ್ಷ ಸುರೇಶ ಸಜ್ಜನ ಹೇಳಿದರು.
ಮೂಡುಬಿದಿರೆಯಲ್ಲಿ 4 ದಿನಗಳ ಕಾಲ ನಡೆದ ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ ಆಳ್ವಾ ಸನ್ಮಾನ ಸ್ವೀಕರಿಸಿ ಮಾತನಾಡಿ, ಸಂಸ್ಥೆಯ ಶಿಕ್ಷಣ ಕ್ಷೇತ್ರಕ್ಕೆ ನೀಡಿದಷ್ಟು ಒತ್ತು ಕಲೆ, ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ನೀಡುವ ಮೂಲಕ ರಾಜ್ಯದ ಯುವ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ವಿರಾಸತ್ ಕಾರ್ಯಕ್ರಮ ಉತ್ತಮ ಕಲ್ಪಿಸಿದೆ ಎಂದರು.
ಡಾ. ಮೋಹನ ಆಳ್ವಾ ಮಾತನಾಡಿ, ರಾಜ್ಯದ ಜನತೆ ನೀಡಿರುವ ಸಹಾಯ ಸಹಕಾರ ಹಾಗೂ ಬೆಂಬಲವೇ ಕಾರ್ಯಕ್ರಮ ಯಶಸ್ವಿಗೆ ಪ್ರಮುಖ ಕಾರಣ ಎಂದು ಭಾವುಕರಾಗಿ ನುಡಿದರು. ಶಾಂತರಡ್ಡಿ ಚೌದ್ರಿ, ಅಮರಯ್ಯಸ್ವಾಮಿ, ಚಂದ್ರಶೇಖರ, ಪ್ರಕಾಶ, ಮಡಿವಾಳಪ್ಪ, ಮಂಜುನಾಥ, ಬಸವಂತರಾಯಗೌಡ, ಶಿವನಗೌಡ, ಪ್ರಕಾಶ ಇತರರಿದ್ದರು.
'ಆರೋಗ್ಯಕರ ಸಮಾಜಕ್ಕೆ ಸಾವಯವ ಕೃಷಿ ಅಗತ್ಯ'
ಯಾದಗಿರಿ: ಸ್ಪರ್ಧಾತ್ಮಕ ಯುಗದಲ್ಲಿ ರೈತರು ತಮ್ಮ ಜಮೀನಿಗೆ ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರ ಹಾಗೂ ಕೀಟನಾಶಕಗಳ ಬಳಕೆ ಕಡಿಮೆ ಮಾಡಿ ಸಾವಯುವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ ಭೂಮಿಯ ಫಲವತ್ತತೆ ಕಾಪಾಡಿ, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಲು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಬಾಲರಾಜ ಕರೆ ನೀಡಿದರು. ನಗರದ ಆಫೀಸರ್ ಕ್ಲಬ್ನಲ್ಲಿ ಕೃಷಿ ಇಲಾಖೆ ಹಮ್ಮಿಕೊಂಡಿದ್ದ ತಾಲೂಕಾ ಮಟ್ಟದ ರೈತರ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾಜಿ ಪ್ರಧಾನಿ ದಿ. ಚರಣಸಿಂಗ್ ಹುಟ್ಟುಹಬ್ಬದ ಡಿ.23 ದಿನವನ್ನು ರೈತರ ದಿನವಾಗಿ ಆಚರಿಸುತ್ತಿರುವುದು ರೈತರಿಗೆ ಸಂತಸ ತಂದಿದೆ ಎಂದರು. ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ಮಂಜುನಾಥ ಮಾತನಾಡಿದರು. ಪ್ರಗತಿಪರ ರೈತರಾದ ಮಲ್ಲರಡ್ಡಿ ಜಟ್ಟೂರ್, ರೈತ ಮಹಿಳೆ ಮರಿಯಳಮ್ಮ, ನೀಲಕಂಠ ಪಾಟೀಲ್ ಅವರನ್ನು ಸನ್ಮಾನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

