ಬೀದಿ ವ್ಯಾಪಾರಿಗಳ ವಿಚಾರ ಸಂಕಿರಣ ನಾಳೆ
ಗುಲ್ಬರ್ಗ: ಬೀದಿ ವ್ಯಾಪಾರಿಗಳ ಸಮಗ್ರ ಅಭಿವೃದ್ಧಿ ಮತ್ತು ಹಿತರಕ್ಷಣೆಗಾಗಿ ಡಿ.26ರಂದು ಬೆಳಗ್ಗೆ 11 ಗಂಟೆಗೆ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಅಖಿಲ ಕರ್ನಾಟಕ ರಾಜ್ಯ ಬೀದಿ ವ್ಯಾಪಾರಿಗಳ ಸಂಘ ಬೃಹತ್ ವಿಚಾರ ಸಂಕಿರಣ ಆಯೋಜಿಸಿದೆ ಎಂದು ಸಂಘದ ಸಂಸ್ಥಾಪಕ ಜಗನ್ನಾಥ ಸೂರ್ಯವಂಶಿ ಮತ್ತು ನಗರಾಧ್ಯಕ್ಷ ಅಮೃತ ಪಾಟೀಲ್ ಸಿರನೂರ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಸಮಾವೇಶದಲ್ಲಿ ಸಚಿವರಾದ ಖಮರುಲ್ ಇಸ್ಲಾಂ, ಡಾ. ಶರಣಪ್ರಕಾಶ ಪಾಟೀಲ್, ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ, ಅಲ್ಲಂಪ್ರಭು ಪಾಟೀಲ್, ಅಮರನಾಥ ಪಾಟೀಲ್, ಜಿಲ್ಲಾಧಿಕಾರಿ ಎನ್.ವಿ. ಪ್ರಸಾದ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಾಶಿನಾಥ ತಳಕೇರಿ, ಮಾಜಿ ಶಾಸಕ ಸುಭಾಷ ಗುತ್ತೇದಾರ, ಪಾಲಿಕೆ ಆಯುಕ್ತ ಶ್ರೀಕಾಂತ ಕಟ್ಟಿಮನಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರವಿಕಿರಣ ಒಂಟಿ ಇತರರು ಪಾಲ್ಗೊಳ್ಳಲಿದ್ದಾರೆ ಎಂದರು.
ಈ ವಿಚಾರ ಸಂಕಿರಣದಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಂಡು ಬರುವ ದಿನಗಳಲ್ಲಿ ನಿಯೋಗದ ಮೂಲಕ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗೆ ಭೇಟಿಯಾಗಿ ಬೀದಿ ವ್ಯಾಪಾರಿಗಳಿಗೆ ಸಂಬಂಧಿಸಿದ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಸರ್ಕಾರ ಒಂದು ಕಡೆ ನಿರ್ಲಕ್ಷ್ಯಕ್ಕೊಳಗಾದ ಜನರಿಗೆ ನೌಕರಿ ನೀಡುತ್ತಿಲ್ಲ. ಮತ್ತೊಂದೆಡೆ ಬೀದಿಯಲ್ಲಿ ವ್ಯಾಪಾರ ಮಾಡಿ ಬದುಕಬೇಕೆಂದರೆ ಮೂಲ ಸೌಕರ್ಯಗಳು ಒದಗಿಸದೇ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಪಾಲಿಕೆ ವತಿಯಿಂದ ಅಧಿಕೃತ ಅನುಮತಿ ನೀಡಿ ಸ್ಥಳಾವಕಾಶ ಒದಗಿಸಬೇಕು, ಅದರಂತೆ ಮಾರುಕಟ್ಟೆ ನಿರ್ಮಾಣ ಮಾಡಬೇಕು, ವ್ಯಾಪಾರಿಗಳಿಗೆ 50 ಸಾವಿರದಿಂದ 1 ಲಕ್ಷದವರೆಗೆ ಜಾಮೀನು ರಹಿತ ಸಾಲ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಇತರ ಪ್ರಮುಖ ವಿಷಯಗಳ ಕುರಿತು ವಿಚಾರ ಸಂಕಿರಣದಲ್ಲಿ ಚರ್ಚಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಅಬ್ದುಲ್ ಸಲಾಂ, ಶಿವಾನಂದ ದಶಮನಿ, ಮಹಾದೇವಪ್ಪ, ರವಿ ಒಂಟಿ, ಹಣಮಂತ ಸುಲ್ತಾನಪುರ, ದತ್ತು ಭಾಸಗಿ, ನಾಗರಾಜ, ಶಿವಕುಮಾರ್, ಶೇಖರ, ಅವಿನಾಶ ರೆಡ್ಡಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

