ಫೆ.7ರಿಂದ ರಾಜ್ಯಮಟ್ಟದ ಸಾಂಸ್ಕೃತಿಕ ಸಾಹಿತ್ಯ ಸಮ್ಮೇಳನ
ಗುಲ್ಬರ್ಗ: ನಿಜಶರಣ ಅಂಬಿಗರ ಚೌಡಯ್ಯ ಸಮಾಜ ಅಧ್ಯಯನ ಅಕಾಡೆಮಿಯು ಫೆ.7ರಿಂದ 9ರವರೆಗೆ ಮೂರು ದಿನಗಳ ಕಾಲ ಸೇಡಂ ತಾಲೂಕಿನ ಸುಕ್ಷೇತ್ರ ಯಾನಾಗುಂದಿಯಲ್ಲಿ ರಾಜ್ಯ ಮಟ್ಟದ ಪ್ರಥಮ ಸಾಂಸ್ಕೃತಿಕ ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧರಿಸಿದೆ.
ಸಮ್ಮೇಳನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 5- 10 ಸಾವಿರ ಸಮಾಜ ಚಿಂತಕರು ಮತ್ತು ವಿದ್ಯಾವಂತ ಯುವಕ- ಯುವತಿಯರನ್ನು ಗುರುತಿಸಿ ಅವರಿಗೆ ಅನೇಕ ವಿದ್ವಾಂಸರು, ವಿಶ್ವವಿದ್ಯಾಲಯ ಪ್ರಾಧ್ಯಾಪಕರು, ಸಮಾಜಿದ ಹಿತ ಚಿಂತಕರು, ಬುದ್ಧಿಜೀವಿಗಳು, ಮಠಾಧೀಶರು, ಸಂಶೋಧಕರಿಂದ ವಿಶೇಷ ತರಬೇತಿಯನ್ನು ನೀಡಿ ಸಮಾಜದ ಸಂಪನ್ಮೂಲಗಳಾಗಿ ಸಮಾಜಮುಖಿಯಾಗಿ ಸೇವೆ ಮಾಡಲು ಪ್ರೋತ್ಸಾಹಿಸಲಾಗುವುದು ಎಂದು ಅಧ್ಯಕ್ಷ ಅವ್ವಣ್ಣ ಮ್ಯಾಕೇರಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸುವ ಅಪೇಕ್ಷಿತ ಶಿಬಿರಾರ್ಥಿಗಳು ಮುಂಚಿತವಾಗಿ ತಮ್ಮ ಹೆಸರು ನೋಂದಾಯಿಸಬೇಕು. ಅವರಿಗೆ ಉಚಿತವಾಗಿ ಉಪಹಾರ, ಊಟ, ವಸತಿ ಹಾಗೂ ಲೇಖನ ಸಾಮಗ್ರಿ ಇತ್ಯಾದಿ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಮೂರು ದಿನಗಳ ಸಮ್ಮೇಳನದ ಸಂಪೂರ್ಣ ಸಾರಾಂಶವನ್ನು ದಾಖಲಿಸಿ ಗ್ರಂಥ ರೂಪದಲ್ಲಿ ಹೊರ ತರಲಾಗುವುದು. ಕಳೆದ ವರ್ಷ ಕೂಡಲಸಂಗಮದಲ್ಲಿ ನಡೆದ ಚಿಂತನಾ ಶಿಬಿರದ ಗ್ರಂಥ ಈ ವರ್ಷ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸರ್ಕಾರದ ಪ್ರತಿನಿಧಿಗಳನ್ನು ಆಹ್ವಾನಿಸಿ ಸಮ್ಮೇಳನದಲ್ಲಿ ಚರ್ಚೆಯಾದ ಸಮಾಜದ ಮೂಲಭೂತ ಸಮಸ್ಯೆಗಳ ಮತ್ತು ವಿವಿಧ ಬೇಡಿಕೆಗಳು ಈಡೇರಿಸಲು ಆಗ್ರಹಿಸಲಾಗುವುದು ಎಂದು ಮ್ಯಾಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

