ಗುಲ್ಬರ್ಗಾ

ಮಹಿಳೆಗೆ ಕಾನೂನು ಅರಿವು ಅಗತ್ಯ: ಹೊನೋಲೆ

Published On :

ಸೇಡಂ; ಮಹಿಳೆಯರು ಕಾನೂನು ಅರಿವು ಹೊಂದಿದ್ದಲ್ಲಿ, ಮಹಿಳೆಯ ಮೇಲಾಗುವ ದೌರ್ಜನ್ಯಗಳನ್ನು ತಡೆಯಲು ಸಾಧ್ಯ ಎಂದು ಸಿವಿಲ್ ನ್ಯಾಯಾಧೀಶ ರವೀಂದ್ರ ಎಲ್. ಹೊನೋಲೆ ಹೇಳಿದರು.
ಪಟ್ಟಣದ ವಕೀಲರ ಸಂಘದ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಮಹಿಳೆಯರಿಗಾಗಿ ಕಾನೂನು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರಿಗೆ ಆಸ್ತಿ ಹಕ್ಕು, ವರದಕ್ಷಿಣೆ ನಿಷೇಧ ಕಾಯ್ದೆ, ಜನನ-ಮರಣ ನೋಂದಣಿಯ ಅಗತ್ಯ ಸೇರಿದಂತೆ ಇತರೆ ಕಾನೂನುಗಳ ಬಗ್ಗೆ ಮಾಹಿತಿ ಅವಶ್ಯವಾಗಿದ್ದು, ಈ ನಿಟ್ಟಿನಲ್ಲಿ ಮಹಿಳೆಯರು ಮುಂದಾಗಬೇಕು. ಗಂಡು-ಹೆಣ್ಣು ಸಮಾನರು ಮತ್ತು ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಮೇಲುಗೈ ಸಾಧಿಸುತ್ತಿರುವುದು ಸಂತಸದ ಸಂಗತಿ ಎಂದರು.
ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿ: ಪ್ರಭಾರಿ ಸಿಡಿಪಿಒ ಅನುರಾಧಾ ಮಾತನಾಡಿ, ಮಹಿಳೆಯರು ಸ್ವತಂತ್ರರಾಗಿ, ಸಮಾಜ ಕಟ್ಟುವಲ್ಲಿ ಶ್ರಮಿಸಬೇಕು ಎಂದರು. ಸಹಾಯಕ ಸರ್ಕಾರಿ ಅಭಿಯೋಜಕ ಅಶೋಕಕುಮಾರ್ ಮಾತನಾಡಿದರು. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಕುರಿತು ವಕೀಲ ಆರ್.ನಾರಾಯಣರೆಡ್ಡಿ, ಹದಿಹರೆಯದ ಮಕ್ಕಳ ಮಾನಸಿಕ ಸ್ಥಿತಿ ಕುರಿತು ನೃಪತುಂಗ ಕಾಲೇಜು ಉಪನ್ಯಾಸಕಿ ಪ್ರೊ. ಶೋಭಾದೇವಿ ಚಕ್ಕಿ, ಭ್ರೂಣಹತ್ಯೆ, ಎಚ್‌ಐವಿ ಏಡ್ಸ್ ಕುರಿತು ಆರೋಗ್ಯ ಶಿಕ್ಷಣಾಧಿಕಾರಿ ಶಂಕರ ಬಿರಾದಾರ, ವರದಕ್ಷಿಣೆ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ನಿಷೇಧ ಕಾಯ್ದೆ ಕುರಿತು ವಕೀಲ ವಿಜಯಕುಮಾರ ಮಿಸ್ಕಿನ್, ಬಾಲ್ಯ ವಿವಾಹ, ಮಾಹಿತಿ ಹಕ್ಕು ಕುರಿತು ವಕೀಲ ನಾಗೇಶ ಮಿಟ್ಟಿ, ಕಡ್ಡಾಯ ಶಿಕ್ಷಣದ ಕುರಿತು ಕಾನಾಗಡ್ಡಾ ಸಿಆರ್‌ಸಿಯ ಸಂಪನ್ಮೂಲ ವ್ಯಕ್ತಿ ದತ್ತಾತ್ರೇಯ ವಿಶ್ವಕರ್ಮ ವಿಶೇಷ ಉಪನ್ಯಾಸ ನೀಡಿದರು.
ವಕೀಲರ ಸಂಘದ ಕಾರ್ಯದರ್ಶಿ ಪ್ರವೀಣಕುಮಾರ್, ವಕೀಲರಾದ ಬಸವರಾಜ ತಡಕಲ್, ಸದಾಶಿವ ಬಳಗಾರ ಇತರರು ಉಪಸ್ಥಿತರಿದ್ದರು. ನಾಗೇಶ ಮಿಟ್ಟಿ ಸ್ವಾಗತಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.