ಗುಲ್ಬರ್ಗಾ

ಸುವರ್ಣ ಗ್ರಾಮ ಕಾಮಗಾರಿಗೆ ಚಾಲನೆ

Published On :

ಜೇವರ್ಗಿ: ತಾಲೂಕಿನ ನೇದಲಗಿ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗಾಗಿ 2013-14ನೇ ಸಾಲಿನಲ್ಲಿ ಸುವರ್ಣ ಗ್ರಾಮ ಯೋಜನೆಗೆ ಆಯ್ಕೆ ಮಾಡಲಾಗಿದೆ ಎಂದು ಶಾಸಕ ಡಾ. ಅಜಯಸಿಂಗ್ ಹೇಳಿದರು.
ತಾಲೂಕಿನ ನೇದಲಗಿ ಗ್ರಾಮದಲ್ಲಿ ಸುವರ್ಣ ಗ್ರಾಮ ಯೋಜನೆ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, 25.4 ಲಕ್ಷ ಅನುದಾನ ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ ಎಂದರು.
ಗ್ರಾಮದಲ್ಲಿ ಸಿಸಿ ರಸ್ತೆ, ಒಳಚರಂಡಿ, ಮಹಿಳಾ ಶೌಚಾಲಯ, ಸಮುದಾಯ ಭವನ, ಅಂಗನವಾಡಿ ಕಟ್ಟಡ ಸೇರಿಸಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಜಿಲ್ಲಾ ಪಂಚಾಯಿತ್ ಎಸ್.ಸಿ.ಪಿ-ಟಿಎಸ್ಪಿ ಯೋಜನೆಯಡಿಯಲ್ಲಿ 6 ಲಕ್ಷ ಅಂದಾಜು ಮೊತ್ತದ ಸಿಸಿ ರಸ್ತೆ ನಿರ್ಮಾಣ, 10 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರು ಶುದ್ಧೀಕರಣ ಘಟಕ, 8 ಲಕ್ಷ ವೆಚ್ಚದ ಕೀರು ನೀರು ಸರಬರಾಜು ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ಶಂಕುಸ್ಥಾಪನೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷ ಮಲ್ಲಣ್ಣಗೌಡ ನೇದಲಗಿ, ತಾಪಂ ಮಾಜಿ ಉಪಾಧ್ಯಕ್ಷ ಶಿವಪುತ್ರಪ್ಪ ಸಾಹು ಕೋರಿ, ಅಣ್ಣು ದೇಸಾಯಿ ಜೇರಟಗಿ, ಮಲ್ಲೇಶಪ್ಪ ಕಲ್ಲೂರ, ಬಹದ್ದೂರ ರಾಠೋಡ, ಮಲ್ಲಿಕಾರ್ಜುನ ಬೂದಿಹಾಳ, ಸಾಹೇಬಗೌಡ ಪಾಟೀಲ್, ತಿಪ್ಪಣ್ಣ ಕರಗಾರ, ಶಿವಾನಂದ ಕಲ್ಲೂರ, ಭೀಮರಾಯ ಯಲಗೋಡ, ಸೋಮಣ್ಣ ಗುತ್ತೇದಾರ, ರಾಜಶೇಖರ ಚೂರಿ ಸೇರಿದಂತೆ ಪಂಚಾಯತಿರಾಜ್ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.