ಗುಲ್ಬರ್ಗಾ

'ಅತ್ಯಾಚಾರ ಪ್ರಕರಣ ತ್ವರಿತ ಕೋರ್ಟ್‌ಗೆ ವಹಿಸಿ'

Published On :

ಗುಲ್ಬರ್ಗ: ದಾವಣಗೆರೆಯಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಬಂಧನಕ್ಕೊಳಗಾದ ಇಬ್ಬರು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ರಾಜ್ಯ ಸರ್ಕಾರ ಕೂಡಲೇ ತ್ವರಿತ ನ್ಯಾಯಾಲಯಕ್ಕೆ ಮೊಕದ್ದಮೆ ನೀಡಬೇಕೆಂದು ರಾಜ್ಯ ನಿಜಶರಣ ಅಂಬಿಗರ ಚೌಡಯ್ಯ ಸಮಾಜ ಅಧ್ಯಯನ ಅಕಾಡೆಮಿ ಅಧ್ಯಕ್ಷ ಅವ್ವಣ್ಣ ಮ್ಯಾಕೇರಿ ಆಗ್ರಹಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡಿ.20ರ ರಾತ್ರಿ ಬಿಸಿಎ ಕಾಲೇಜಿನ ವಿದ್ಯಾರ್ಥಿನಿ ತರಗತಿ ಮುಗಿಸಿಕೊಂಡು ತನ್ನ ತಂಗಿಯೊಂದಿಗೆ ತೆರಳುತ್ತಿದ್ದಾಗ ಪರಿಚಿತ ವಿದ್ಯಾರ್ಥಿ ಪೃಥ್ವಿ ಎಂಬಾತ ಗೆಳತಿಯೊಬ್ಬಳಿಗೆ ತೊಂದರೆಯಾಗಿದೆ ಕೂಡಲೇ ಬನ್ನಿ ಎಂದು ಬೈಕ್ ಮೇಲೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದರು.
ತ್ವರಿತ ನ್ಯಾಯಾಲಯಕ್ಕೆ ವಹಿಸಿ: ಈ ಕುರಿತು ವಿದ್ಯಾರ್ಥಿನಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಅತ್ಯಾಚಾರವೆಸಗಿದ ಪೃಥ್ವಿ ಮತ್ತು ಆತನಿಗೆ ಸಹಾಯ ಮಾಡಿದ ಇನ್ನೊಬ್ಬತನನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಪೃಥ್ವಿ ಎಂಬಾತ ಅಪ್ರಾಪ್ತವೆಂದು ಜನನ ಪ್ರಮಾಣ ಪತ್ರದ ಮೇಲೆ ಆತನನ್ನು ರಕ್ಷಿಸಲು ಅವರ ಪಾಲಕರು ಮುಂದಾಗಿದ್ದಾರೆ.
ಸರ್ಕಾರ ಈ ಪ್ರಕರಣವನ್ನು ಬಾಲ ನ್ಯಾಯಾಲಯಕ್ಕೆ ವಹಿಸದೆ ತ್ವರಿತ ನ್ಯಾಯಾಲಯಕ್ಕೆ ವಹಿಸಿ ಯುವಕರು ಮುಂದೆ ಇಂತಹ ಕೃತ್ಯ ಎಸಗದಂತೆ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.
ಹಿಂದುಳಿದ ಗಂಗಾಮತ ಸಮಾಜದ ಬಡ ವಿದ್ಯಾರ್ಥಿನಿಯ ಮೇಲೆ ನಡೆದ ಘಟನೆ ಜನತೆಯನ್ನು ಬೆಚ್ಚು ಬೀಳುವಂತೆ ಮಾಡಿದೆ. ಇಂತಹ ಪ್ರಕರಣಗಳು ರಾಜ್ಯದಲ್ಲಿ ಪದೇ ಪದೇ ಆಗದಂತೆ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಅನುಸರಿಸಬೇಕು.
ದುಷ್ಕೃತ್ಯವೆಸಗಿದ ಪ್ರಮುಖ ಆರೋಪಿ ಕುಟುಂಬ ತುಂಬಾ ಪ್ರಭಾವಶಾಲಿಯಾಗಿದೆ ಎಂದು ಕೇಳಿ ಬಂದಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಗಂಗಾಮತದ ಯುವತಿ, ವಿದ್ಯಾರ್ಥಿನಿಯರು ಹಾಗೂ ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗುವ ಸನ್ನವೇಶಗಳು ಕಂಡುಬಂದರೆ ತಕ್ಷಣ ಸಹಾಯವಾಣಿ 0407102341ಗೆ ಕರೆ ಮಾಡಿದರೆ, ತಕ್ಷಣ ಪ್ರತಿನಿಧಿಗಳು ಧಾವಿಸಿ ಬಂದು ರಕ್ಷಣೆ ಮಾಡಲಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.