ಸಂಭಾಜಿ ವಿರುದ್ಧ ಪ್ರತಿಭಟನೆ, 22 ಜನರ ಬಂಧನ
ಗುಲ್ಬರ್ಗ: ಮಹಾರಾಷ್ಟ್ರ ಏಕೀಕರಣ ಸಮಿತಿ ಅಧ್ಯಕ್ಷ ಶಾಸಕ ಸಂಭಾಜಿರಾವ ಪಾಟೀಲ್ ವಿರುದ್ಧ ಘೋಷಣೆ ಕೂಗಿ ಕಪ್ಪು ಬಾವುಟ ಪ್ರದರ್ಶಿಸಿದ ಸುಮಾರು 22 ಜನ ಕನ್ನಡಪರ ಸಂಘಟನೆಯ ಕಾರ್ಯಕರ್ತರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.
ವಿಧಾನ ಮಂಡಳದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಭೆಯು ನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆಯುತ್ತಿದ್ದು, ಈ ಸಭೆಯಲ್ಲಿ ಪಾಲ್ಗೊಳ್ಳಲು ಸಂಭಾಜಿರಾವ ಪಾಟೀಲ್ ನಗರಕ್ಕೆ ಆಗಮಿಸಿದರು. ವಿಷಯ ತಿಳಿದ ಕರವೇ ಹಾಗೂ ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರು ಮಿನಿ ವಿಧಾನಸೌಧದ ಆವರಣಕ್ಕೆ ಆಗಮಿಸಿ ಕಪ್ಪು ಬಾವುಟ ಪ್ರದರ್ಶಿಸಿದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದರು. ಪ್ರತಿಭಟನೆಯಲ್ಲಿ ಕರವೇಯ ತಿಪ್ಪಣ್ಣ ಲಂಡನಕರ್, ಶಿವಕುಮಾರ್ ನಾಟಿಕರ್, ಸಂತೋಷ ಪಾಟೀಲ್, ಸಂತೋಷ ಚವ್ಹಾಣ, ಕಾಶಿನಾಥ ಮಂದೇವಾಲ, ಕುಮಾರ್ ಕವಡೆ, ಅಶೋಕ ಭೀಮಳ್ಳಿ, ಶರಣಗೌಡ ಪಾಟೀಲ್, ಸಿದ್ದಣ್ಣ ಗೌಡ ಪಾಟೀಲ್ ಮತ್ತಿತರರಿದ್ದರು.
ಬಂಧನ ಖಂಡಿಸಿ ಆಕ್ರೋಶ
ಬೆಳಗಾವಿ ಶಾಸಕ ಸಂಭಾಜಿರಾವ ಪಾಟೀಲ್ ವಿರುದ್ಧ ಪ್ರತಿಭಟಿಸಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವ ಕ್ರಮವನ್ನು ಖಂಡಿಸಿ ಚಿತ್ತಾಪುರದಲ್ಲಿ ಕರವೇ ತಾಲೂಕಾಧ್ಯಕ್ಷ ಮಹೇಶ ಕಾಶಿ ನೇತೃತ್ವದಲ್ಲಿ ತಹಸೀಲ್ದಾರ್ ಕಚೇರಿ ಎದುರು ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಕರ್ನಾಟಕದ ನಾಡು- ನುಡಿಯ ಬಗ್ಗೆ ಅಸಡ್ಡೆ ಹೊಂದಿರುವ ಬೆಳಗಾವಿ ಶಾಸಕ ಸಂಭಾಜಿರಾವ್ ಪಾಟೀಲರನ್ನು ಗಡಿಪಾರು ಮಾಡಬೇಕು. ಬಂಧನಕ್ಕೊಳಗಾದ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

