4ರಂದು 'ಲೋಕದಿ ರಂಗಭೂಮಿಯ ಶೃಂಗ ಕಾರ್ಯಕ್ರಮ'
ಗುಲ್ಬರ್ಗ: ಈ ಭಾಗದ ನಾಟಕಾರರ ಬದುಕು- ಬರಹದ ಬಗ್ಗೆ ವಿಶೇಷವಾಗಿ ಯುವ ಮತ್ತು ವಿದ್ಯಾರ್ಥಿ ಸಮೂಹಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ನಾಟಕ ಲೋಕದಿ ರಂಗಭೂಮಿಯ ಶೃಂಗ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲು ವಿಶ್ವಜ್ಯೋತಿ ಪ್ರತಿಷ್ಠಾನ ಮುಂದಾಗಿದೆ. ಪ್ರತಿ ತಿಂಗಳು ಒಬ್ಬೊಬ್ಬ ನಾಟಕಾರರಂತೆ ನಿರಂತರವಾಗಿ ಮಾಸಿಕ ಕಾರ್ಯಕ್ರಮ ನಡೆಸಲು ನಿರ್ಧರಿಸಿದ್ದು, ಇದೇ ಫೆ.4 ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಫೆ.4 ರಂದು ಬೆಳಗ್ಗೆ 10.30ಕ್ಕೆ ನಗರದ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ಹಿರಿಯ ನಾಟಕಕಾರ ಅಫಜಲ್ಪುರದ ರಮಾನಂದ ಹಿರೇಜೇವರ್ಗಿ ಅವರ ಕುರಿತು ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಗುಲ್ಬರ್ಗ ದೂರದರ್ಶನ ಕೇಂದ್ರದ ನಿರ್ದೇಶಕ ಎಂ.ಬಿ. ಪಾಟೀಲ್ ಉದ್ಘಾಟಿಸಲಿದ್ದಾರೆ ಎಂದರು. ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಪದನಿಮಿತ್ತ ಸಹ ನಿರ್ದೇಶಕ ಡಾ. ಎಚ್. ಬಾಲರಾಜು ಅಧ್ಯಕ್ಷತೆ ವಹಿಸಲಿದ್ದಾರೆ. ಪದವಿ ಕಾಲೇಜಿನ ಪ್ರಾಧ್ಯಾಪಕ, ಸಾಹಿತಿ ಡಾ. ಶ್ರೀಶೈಲ್ ನಾಗರಾಳ ಅವರು ನಾಟಕಕಾರರ ಬದುಕು- ಬರಹದ ಕುರಿತು ಮಾತನಾಡಲಿದ್ದಾರೆ. ನಿವೃತ್ತ ಶಿಕ್ಷಕ ಶರಣಪ್ಪ ದೇಸಾಯಿ, ಸಾಹಿತಿ ನಿರ್ಮಲಾದೇವಿ ಸಾಲೂಕ್ಯ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು. ಬರುವ ದಿನಗಳಲ್ಲಿ ಹಿರಿಯ ನಾಟಕಕಾರ ಈಶ್ವರಪ್ಪ ಫರಹತಾಬಾದ್, ಎಲ್ಬಿಕೆ ಅಲ್ದಾಳ, ಶೋಭಾ ರಂಜೋಳಕರ್, ವಿಶ್ವನಾಥ ಮಾಸ್ತರ್ ಬೆಳಗುಂಪಾ, ಅಮೃತೇಶ ಮಾಸ್ತರ್ ಕಲಶೆಟ್ಟಿ, ಪ್ರಭಾಕರ ಜೋಶಿ, ಪ್ರಭಾಕರ ಸಾತಖೇಡ, ಸಿದ್ದಲಿಂಗಯ್ಯ ಸ್ವಾಮಿ ಮಲಕೂಡ, ಸುಜಾತಾ ಜಂಗಮಶೆಟ್ಟಿ ಕುರಿತು ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

