ಉತ್ತಮ ಆರೋಗ್ಯಕ್ಕೆ ಕ್ರೀಡೆಸಹಕಾರಿ: ರಾಜಾ ಹನುಮಪ್ಪ
ಸುರಪುರ: ಕ್ರೀಡೆಗಳಿಂದ ಮನುಷ್ಯ ಮಾನಸಿಕ ಮತ್ತು ದೈಹಿಕವಾಗಿ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಕ್ರೀಡೆಗಳು ಕ್ರಿಯಾಶೀಲ ಚಟುವಟಿಕೆಗೆ ಪೂರಕವಾಗುವುದರ ಜೊತೆಗೆ ಸದೃಢ ಆರೋಗ್ಯಕ್ಕೆ ಸಹಕಾರಿಯಾಗಿವೆ. ಯುವಕರು ಕ್ರೀಡೆಗಳಲ್ಲಿ ಪಾಲ್ಗೊಂಡು ಬೌದ್ಧಿಕ ಮಟ್ಟ ಹೆಚ್ಚಿಸಿಕೊಂಡು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕೆಂದು ಜಿಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪನಾಯಕ ಕರೆ ನೀಡಿದರು. ಇಲ್ಲಿಯ ಶ್ರೀಪ್ರಭು ಕಾಲೇಜಿನ ಮೈದಾನದಲ್ಲಿ ಆರ್ಟಿಜೆ ಕಪ್ ರಾಜ್ಯಮಟ್ಟದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉದ್ಘಾಟಿಸಿ ಮಾತನಾಡಿದರು. ಯುವಕರು ಕ್ರೀಡೆಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ತೋರಿ ತಮ್ಮ ಪ್ರತಿಭೆಯನ್ನು ಹೊರ ಹೊಮ್ಮಿಸಬೇಕು. ಕ್ರೀಡೆಯನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸುವುದರೊಂದಿಗೆ, ಸೋಲೇ ಗೆಲುವಿನ ಮೆಟ್ಟಿಲು ಎಂದು ಭಾವಿಸಿ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕೆಂದು ಸಲಹೆ ನೀಡಿದರು. ಕಾಲೇಜಿನ ಪ್ರಾಚಾರ್ಯ ಬಿ.ಎಸ್.ಬಡಗಾ ಅಧ್ಯಕ್ಷತೆ ವಹಿಸಿದ್ದರು.
ಉದ್ಯಾನ ಜಾಗದಲ್ಲಿ ಅಕ್ರಮ
ಕಟ್ಟಡ, ಕ್ರಮಕ್ಕೆ ಒತ್ತಾಯ
ಯಾದಗಿರಿ: ಉದ್ಯಾನವನ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರು.
ಯಾದಗಿರಿ ಬಿ. ಗ್ರಾಮದ ಸರ್ವೇ ನಂ. 380ರಲ್ಲಿ ಉದ್ಯಾನವನಕ್ಕಾಗಿ ಮೀಸಲಿರಿಸಿದ್ದ ಜಾಗದಲ್ಲಿ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಸಾರ್ವಜನಿಕ ಆಸ್ತಿ ಕಬಳಿಕೆ ಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿರುವುದರಿಂದ ನಗರದಲ್ಲಿ ಉದ್ಯಾನವನಗಳ ಅವಶ್ಯಕತೆ ಇದೆ. ನಗರದ ವಿವಿಧೆಡೆ ಕೂಡ ಉದ್ಯಾನವನ ಅತಿಕ್ರಮಣ ಪ್ರಕರಣಗಳು ಹೆಚ್ಚಾಗಿವೆ. ಈ ಕೂಡಲೇ ಜಿಲ್ಲಾಧಿಕಾರಿಗಳು ಅಂಥವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸಂಘಟನೆ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಸಿದ್ದಾರೆ. ಗೋವಿಂದರಡ್ಡಿ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

