ಗುಲ್ಬರ್ಗಾ

ದಲಿತರಿಗೆ ಪ್ರತ್ಯೇಕ ಬಜೆಟ್ ಮಂಡಿಸಿ: ಆಗ್ರಹ

Published On :

ಗುಲ್ಬರ್ಗ: ದಲಿತ ಸಮಾಜದ ಏಳಿಗೆಗೆ ಸರ್ಕಾರ ಬದ್ಧವಾಗಿರಬೇಕು, ಕೃತಿಯಲ್ಲಿಯೂ ಬದ್ಧತೆ ಪ್ರತಿಫಲನವಾಗಬೇಕು ಎಂದಿರುವ ಆರ್‌ಪಿಐ ರಾಷ್ಟ್ರೀಯ ಮುಖಂಡ ರಾಮದಾಸ ಅಠವಳೆ ರಾಜ್ಯ ಸರ್ಕಾರ ತನ್ನ ವ್ಯಾಪ್ತಿಯ ದಲಿತ ಸಮುದಾಯ ಏಳಿಗೆಗೆ ಪ್ರತ್ಯೇಕ ಬಜೆಟ್ ಮಂಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಂಬಂಧ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಗ್ರಹಿಸಿದ ಅವರು, ದಲಿತ ಸಮಾಜದ ಏಳಿಗೆಯೇ ಸರ್ಕಾರಗಳ ಗುರಿಯಾಗಿರಬೇಕು ಎಂದರಲ್ಲದೆ ದಲಿತರ ಉದ್ಧಾರದಿಂದ ಮಾತ್ರ ಸಮಾನ ಪ್ರಗತಿ ಸಾಧ್ಯ ಎಂದರು. ದಲಿತರು- ಶೋಷಿತ ಸಮಾಜದ ಮೇಲಿನ ದೌರ್ಜನ್ಯ ತಡೆಗೆ ಪ್ರತ್ಯೇಕ ಪೊಲೀಸ್ ಫೋರ್ಸ್ ರಚಿಸಬೇಕು ಎಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಆರ್‌ಪಿಐ ರಾಜ್ಯಾಧ್ಯಕ್ಷ ವೆಂಕಟಸ್ವಾಮಿ, ಹಿರಿಯ ಮುಖಂಡ ಶಿವರಾಂ ಮೋಘಾ ಮತ್ತಿತರರು ಉಪಸ್ಥಿತರಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.